ಶರಣ ಚಿಂತನೆ ಮನೆಮನೆಗೂ ತಲುಪಲಿ

ಭಾನುವಾರ ಸಮೀಪದ ಬೈಲೂರು ಗ್ರಾಮದ ನಿಷ್ಕಲ ಮಂಟಪದ ಹರ್ಡೆಕರ ಮಂಜಪ್ಪ ಸಭಾಭವನದಲ್ಲಿ ಬಸವ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇವರನ್ನು ಸತ್ಕರಿಸಲಾಯಿತು.
ಭಾನುವಾರ ಸಮೀಪದ ಬೈಲೂರು ಗ್ರಾಮದ ನಿಷ್ಕಲ ಮಂಟಪದ ಹರ್ಡೆಕರ ಮಂಜಪ್ಪ ಸಭಾಭವನದಲ್ಲಿ ಬಸವ ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಚಿವ ಸತೀಶ ಜಾರಕಿಹೊಳಿ, ಶಾಸಕ ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇವರನ್ನು ಸತ್ಕರಿಸಲಾಯಿತು.
Published on
ವಿಜಯವಾಣಿ ಸುದ್ದಿಜಾಲ ಇಟಗಿ
ಹನ್ನೆರಡನೇ ಶತಮಾನದ ಬಸವಾದಿ ಶರಣರ ತಾತ್ವಿಕ ಚಿಂತನೆಗಳನ್ನು ಪ್ರತಿ ಮನೆಮನೆಗೂ ತಲುಪಿಸಬೇಕಾದ ಅವಶ್ಯಕತೆ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸಮೀಪದ ಬೈಲೂರು ಗ್ರಾಮದ ನಿಷ್ಕಲ ಮಂಟಪದ ಹರ್ಡೆಕರ ಮಂಜಪ್ಪ ಸಭಾಭವನದಲ್ಲಿ ಭಾನುವಾರ ಬಸವ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಮೂರು ದಶಕಗಳಿಂದ ಬಸವಣ್ಣನವರ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಮತ್ತು ಸ್ಫೂರ್ತಿ ತುಂಬಲಿ ಎಂದರು.
ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಸಮಾಜಕ್ಕೆ ಸಂಸ್ಕಾರ ನೀಡುವಲ್ಲಿ ಬೈಲೂರು ನಿಷ್ಕಲ ಮಂಟಪದ ಸ್ವಾಮೀಜಿ ಮಾಡುವ ಕಾರ್ಯಗಳು ಮಾದರಿಯಾಗಿವೆ ಎಂದರು.
ಡಾ.ವೆಂಕಟೇಶ ಕುಮಾರ ಅವರ ವಚನ ಸಂಗೀತ ನೆರೆದ ಜನರನ್ನು ಮಂತ್ರಮುಗ್ಧರನ್ನಾಗಿಸಿತು. ಕಿತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಚನಬಸಪ್ಪ ತುಬಾಕಿ ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಹೆಡ್ ಕಾನ್‌ಸ್ಟೆಬಲ್ ಜಗದೀಶ ಕಾದ್ರೊಳ್ಳಿ ಹಾಗೂ ಬೈಲೂರು ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಆರ್.ಆರ್.ರೇವಡೆಕರ, ಪಿಯು ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ನಿಜಗುಣಾನಂದ ಸ್ವಾಮೀಜಿ, ಜನವಾಡದ ಮಲ್ಲಿಕಾರ್ಜುನ ಸ್ವಾಮೀಜಿ, ಗರಗದ ಮಡಿವಾಳೇಶ್ವರ ಮಠದ ಆತ್ಮಾರಾಮ ಸ್ವಾಮೀಜಿ, ಮುದಗಲ್ಲದ ಮಹಾಂತ ಸ್ವಾಮೀಜಿ, ಬಸವಾನಂದ ಸ್ವಾಮೀಜಿ, ಶಾಸಕ ಬಾಬಾಸಾಹೇಬ ಪಾಟೀಲ, ವಿನಯ ನಾವಲಗಟ್ಟಿ, ಬಾಲಭವನದ ಅಧ್ಯಕ್ಷ ಅಡಿವೇಶ ಇಟಗಿ, ರಾಣಿ ಶುಗರ್ಸ್ ಉಪಾಧ್ಯಕ್ಷ ಶಿವನಗೌಡ ಪಾಟೀಲ, ನಿರ್ದೇಶಕ ಶಂಕರ ಹೋಳಿ ಹಾಗೂ ಶಂಕರ ಗುಡಸ ಇತರರಿದ್ದರು. ನಾಗೇಶ ಅಜ್ಜವಾಡಿಮಠ ಸ್ವಾಗತಿಸಿದರು ಶಿಕ್ಷಕ ವಿವೇಕ ಕುರಗುಂದ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net