ಪೊಲೀಸ್ ಇನ್ಸ್ಪೆಕ್ಟರ್ ಎಸ್.ಶಿವರಾಜ್ ನೇತೃತ್ವದಲ್ಲಿ ಬುಧವಾರ ಸಂಜೆ ಖಚಿತ ಮಾಹಿತಿ ಮೇರೆಗೆ ಇಸ್ಪಿಟ್ ಜೂಜು ಅಡ್ಡೆ ಮೇಲೆ ನಡೆಸಿದ್ದು, ದಾಳಿ ವೇಳೆ ಆರೋಪಿಗಳಿಂದ 2,270 ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 87ರ ಅನ್ವಯ ಗುರುವಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.