ಟಿ.ನರಸೀಪುರ: ಮೈಸೂರಿನ ಟಿ. ನರಸೀಪುರ ತಾಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಶಿವಣ್ಣ (50), ಅವರ ಪತ್ನಿ ನಾಗರತ್ನ (45) ಹಾಗೂ ಪುತ್ರಿ ರಕ್ಷಿತಾ (21) ಮೃತಪಟ್ಟವರು. ಮಾನಸಿಕ ಕಿರುಕುಳದಿಂದ ಬೇಸತ್ತು ಈ ಕೃತ್ಯ ಎಸಗಿರುವುದಾಗಿ ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ.