ಚಿಂತಾಮಣಿ: ಬೆಂಗಳೂರು ರಸ್ತೆಯ ಕೆಂದನಹಳ್ಳಿ ಗೇಟ್ ಬಳಿ ಕಾರು&ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಂದನಹಳ್ಳಿ ಗ್ರಾಮದ ವಿಜಯ (30) ಮತ್ತು ದೊಡ್ಡೇಗೌಡ (28), ಬೊಮ್ಮೆಕಲ್ ಗ್ರಾಮದ ಜೆಸಿಬಿ ಡೆವರ್ ಅಂಬರೀಶ್ ಗಾಯಾಳುಗಳು.
ನಗರದಲ್ಲಿ ಕೆಲಸ ಮುಗಿಸಿಕೊಂಡು ದ್ವಿಚಕ್ರವಾಹನದಲ್ಲಿ ಸ್ವಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಅವಡ ಸಂಭವಿಸಿದೆ. ಕಾರು ಬೆಂಗಳೂರಿನಿಂದ ಚಿಂತಾಮಣಿಗೆ ಹೋಗುತ್ತಿತ್ತು ಎನ್ನಲಾಗಿದೆ.
ಅಪಘಾತದ ತೀವ್ರತೆಗೆ ಬೈಕ್ ಮತ್ತು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಎಷ್ಟು ಮಂದಿ ಇದ್ದರೂ ಎಂಬ ವಿವರಗಳು ಲಭ್ಯವಾಗಿಲ್ಲ. ಗಾಯಗೊಂಡವರ ಪೈಕಿ ಒಬ್ಬನನ್ನು ಬೆಂಗಳೂರು ನಿಮ್ಹಾನ್ಸ್ಗೆ, ಮತ್ತಿಬ್ಬರನ್ನು ಚಿಕ್ಕಬಳ್ಳಾಪುರ ಹಾಗೂ ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.