ರಾಜಾಜಿನಗರ, ಗೊರೆಗುಂಟೆಪಾಳ್ಯ ಮತ್ತು ರೈಲ್ವೆ ಪ್ಯಾರಲಲ್ ರಸ್ತೆ ಸೇರಿ ನಗರದ ಕೆಂದ್ರ, ಪಶ್ಚಿಮ ಮತ್ತು ಉತ್ತರ ಭಾಗದ ಹಲವು ಪ್ರದೇಶಗಳಲ್ಲಿ ವರುಣಾರ್ಭಟ ಜಾಸ್ತಿ ಇತ್ತು. ಕೆ.ಆರ್.ಮಾರುಕಟ್ಟೆ, ಕೆಂಪೇಗೌಡ ಬಸ್ ನಿಲ್ದಾಣ, ವಸಂತನಗರ, ಶಾಂತಿನಗರ, ಜಯನಗರ, ಜೆ.ಪಿ. ನಗರ, ಬನಶಂಕರಿ, ಕೋಣನಕುಂಟೆ, ಹೆಬ್ಬಾಳ, ಯಲಹಂಕ, ಸದಾಶಿವನಗರ, ವಿಜಯನಗರ, ಚಂದ್ರಾಲೇಔಟ್, ಇಂದಿರಾನಗರ, ಲಗ್ಗೆರೆ, ನಂದಿನಿ ಲೇಔಟ್, ಮಹಾಲಕ್ಷ್ಮಿ ಲೇಔಟ್, ಸುಬ್ರಮಣ್ಯ ನಗರ, ನಾಗರಬಾವಿ, ಮೂಡಲಪಾಳ್ಯ, ಗಿರಿನಗರ, ಬಸವನಗುಡಿ ಮತ್ತು ಶೇಷಾದ್ರಿಪುರದಲ್ಲಿ ಅರ್ಧ ಗಂಟೆ ಮಳೆಯಾಯಿತು.