

ಶಿಡ್ಲಟ್ಟ :
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅನಧಿಕೃತವಾಗಿ ಮನೆ ನಿರ್ಮಿಸಿಕೊಂಡು ವಾಸವಾಗಿರುವ ಸುಮಾರು 12 ಸಾವಿರ ಕುಟುಂಬಗಳಿಗೆ ಶಾಶ್ವತ ಮಾಲೀಕತ್ವ ಕಲ್ಪಿಸುವ ಉದ್ದೇಶದಿಂದ ಕಂದಾಯ ಗ್ರಾಮದ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಪ್ರಭು ತಿಳಿಸಿದರು.
ಪೌತಿ ಖಾತೆ ಅಭಿಯಾನ
ಜಿಲ್ಲೆಯಲ್ಲಿ ಎರಡು ತಲೆಮಾರುಗಳಿಂದ ಬಾಕಿ ಉಳಿದಿರುವ ಆಸ್ತಿಗಳನ್ನು ಮುಂದಿನ ತಲೆಮಾರಿನ ವಾರಸುದಾರರ ಹೆಸರಿಗೆ ವರ್ಗಾಯಿಸುವ ಪೌತಿ ಖಾತೆ ಅಭಿಯಾನವನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 1 ಲಕ್ಷಕ್ಕೂ ಹೆಚ್ಚು ಪೌತಿ ಖಾತೆಗಳನ್ನು ಮಾಡಲಾಗಿದ್ದು, ಶಿಡ್ಲಟ್ಟ ತಾಲೂಕಿನಲ್ಲಿ ಮುಂದಿನ ಎರಡು ಮೂರು ತಿಂಗಳಲ್ಲಿ ಅಭಿಯಾನವನ್ನು ಪೂರ್ಣಗೊಳಿಸಲು ಸಂಕಲ್ಪಿಸಲಾಗಿದೆ ಎಂದು ಡಿಸಿ ತಿಳಿಸಿದರು.
ದರಖಾಸ್ತು, ಪೋಡಿ ದಾಖಲೆಗಳ ಡಿಜಿಟಲೀಕರಣ
ಶಿಡ್ಲಟ್ಟ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ದರಖಾಸ್ತು, ಪೋಡಿ ದಾಖಲೆಗಳನ್ನು ಸ್ಕಾ$್ಯನ್ ಮಾಡಿ, ಸರ್ವೇ ನಡೆಸಿ, ದಾಖಲೆಗಳ ನೈಜತೆಯನ್ನು ಪರಿಶೀಲಿಸಿ ಆನ್ಲೈನ್ನಲ್ಲಿ ಅಳವಡಿಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ಅಗತ್ಯ ದಾಖಲೆಗಳನ್ನು ಸುಲಭವಾಗಿ ಪಡೆಯಲು ಸಾಧ್ಯವಾಗಲಿದೆ.ಈ ಕಾರ್ಯದಲ್ಲಿ ಈಗಾಗಲೇ ಶೇ.70 ಕೆಲಸ ಪೂರ್ಣಗೊಂಡಿದ್ದು, ಇನ್ನೂ ಒಂದೂವರೆ ತಿಂಗಳಲ್ಲಿ ಸಂಪೂರ್ಣ ಕಾರ್ಯ ಮುಗಿಸುವಂತೆ ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಸಿ ಹೇಳಿದರು. ಜನರಿಗೆ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ತಪ್ಪಿಸಿ ಜನಸ್ನೇಹಿ ಆಡಳಿತ ನೀಡುವುದು ಇದರ ಉದ್ದೇಶವಾಗಿದೆ ಎಂದರು.
ನೀರಿಗೆ ಪರ್ಯಾಯ ವ್ಯವಸ್ಥೆ
ಮಳೆ ಕೊರತೆಯಿಂದ ನಗರಕ್ಕಿಂತ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಈಗಾಗಲೇ 14 ಕಡೆ ಖಾಸಗಿ ಬೋರ್ವೆಲ್ಗಳಿಂದ ನೀರು ಪಡೆದು ಸಾರ್ವಜನಿಕರಿಗೆ ಪೂರೈಕೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ.ಪ್ರಸ್ತುತ ಬರ ಪರಿಸ್ಥಿತಿಯಲ್ಲಿ ಹೊಸ ಬೋರ್ವೆಲ್ಗಳನ್ನು ಕೊರೆಸಿದರೆ ನೀರು ಸಿಗುವ ಸಾಧ್ಯತೆ ಕಡಿಮೆ ಇರುವುದರಿಂದ, ಸದ್ಯಕ್ಕೆ ಖಾಸಗಿ ಬೋರ್ವೆಲ್ಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಮಳೆ ಬಂದ ನಂತರ ಅಗತ್ಯವಿರುವ ಕಡೆಗಳಲ್ಲಿ ಹೊಸ ಬೋರ್ವೆಲ್ಗಳನ್ನು ಕೊರೆಸುವ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.
ಮಳೆ ಅಭಾವದಿಂದ ಬಿತ್ತನೆ ಮಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ನೆರವು ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಸುಮಾರು 1.50 ಲಕ್ಷ ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದು, ಅವರ ವಂತಿಕೆ ಸುಮಾರು 4.50 ಕೋಟಿ ಇದೆ