ಕಾರ್ಯಗಾರದಲ್ಲಿ ನೂರಾರು ಸಂಖ್ಯೆಯಲ್ಲಿ ವಿಭಾಗದ ಬೀದರ, ಬಳ್ಳಾರಿ, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯನಗರ, ಕಲಬುರಗಿ ಜಿಲ್ಲೆಯ ಎಲ್ಲಾ ಎನ್.ಟಿ.ಇ.ಪಿ ಕಾರ್ಯಕ್ರಮದ ಡಿಟಿಓ, ಡಿಪಿಎಂ, ಡಿಪಿಎಸ್, ಎಸ್.ಟಿ.ಎಸ್ ಮತ್ತು ಎನ್.ಟಿ.ಸಿ.ಪಿ ಕಾರ್ಯಕ್ರಮದ ಟಿ.ಸಿ.ಸಿ ಆಪ್ತ ಸಮಾಲೋಚಕರು, ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಟಿ.ಸಿ.ಸಿ ಸ್ಯಾಟಲೈಟ್ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ರಾಕೇಶ್ ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗೀಯ ತಂಬಾಕು ನಿಯಂತ್ರಣ ಘಟಕದ ಕಾರ್ಯಕ್ರಮ ಸಂಯೋಜಕ ಮಹಾಂತೇಶ್ ಉಳ್ಳಾಗಡಿ ನಿರೂಪಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಸುಜಾತಾ ಪಾಟೀಲ ಸ್ವಾಗತಿಸಿ ವಂದಿಸಿದರು.