ಹುಳಿಯಾರು: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರಗಳ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂದಿನ ವಿದ್ಯಾರ್ಥಿಗಳೇ ನಾಳಿನ ಪರಿಸರ ರಕ್ಷಕರು ಎಂದು ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಥಾಪಕ ಪ್ರಶಾಂತ್ ತಿಳಿಸಿದರು.
ಹುಳಿಯಾರು ಸಮೀಪದ ದೊಡ್ಡಎಣ್ಣೀಗೆರೆ ಜ್ಞಾನ ಭಾರತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.
ಕಾರ್ಯದರ್ಶಿ ಅನಿತಾ ಮಾತನಾಡಿ, ಪರಿಸರ ಮಾಲಿನ್ಯವನ್ನು ತಡೆಗಟ್ಟಲು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು, ನೀರಿನ ಮಿತ ಬಳಕೆ ಮತ್ತು ಪ್ರತಿಯೊಬ್ಬರೂ ತಮ್ಮ ಜನ್ಮದಿನದಂದು ಕನಿಷ್ಠ ಒಂದು ಸಸಿ ನೆಡುವ ಸಂಪ್ರದಾಯವನ್ನು ರೂಢಿಸಿಕೊಳ್ಳಬೇಕು ಎಂದರು.