ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ನಿರ್ಧಾರ

ಚಿತ್ರ ೨೩ ಕೆ.ಎಲ್.ಆರ್. ೦೧ : ಜಿಲ್ಲಾಧಿಕಾರಿ ಎಂ.ಆರ್.ರವಿ ರವರ ಭಾವಚಿತ್ರ
ಚಿತ್ರ ೨೩ ಕೆ.ಎಲ್.ಆರ್. ೦೧ : ಜಿಲ್ಲಾಧಿಕಾರಿ ಎಂ.ಆರ್.ರವಿ ರವರ ಭಾವಚಿತ್ರ
Published on
ವಿಜಯವಾಣಿ ಸುದ್ದಿಜಾಲ ಕೋಲಾರ
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ತೊಗರಿ ಖರೀದಿಸಲು ಕೋಲಾರ ಜಿಲ್ಲೆಯಲ್ಲಿ ೪ ತಾಲ್ಲೂಕುಗಳಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ರೈತರು ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕಪೋರ್ಸ್ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೋಲಾರ, ಬಂಗಾರಪೇಟೆ, ಮಾಲೂರು, ಮುಳಬಾಗಿಲು ತಾಲ್ಲೂಕುಗಳ ಟಿಎಪಿಎಂಸಿ ಆವರಣದಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ರೈತರು ಈಗಿನಿಂದಲೇ ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದರು.
ಖರೀದಿ ಕೇಂದ್ರಗಳಲ್ಲಿ ಪ್ರತಿ ಕ್ವಿಂಟಲಿಗೆ ೮೦೦೦ ರೂ.ಗಳ ಬೆಂಬಲ ಬೆಲೆಯಾಗಿ ನೀಡಲಾಗುತ್ತಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ೪ ಕ್ವಿಂಟಲ್‌ನAತೆ ಫ್ರೂಟ್ ತಂತ್ರಾAಶದಲ್ಲಿ ಲಭ್ಯವಾಗುವ ರೈತರು ತೊಗರಿ ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಲ್ಲಿ ತೊಗರಿಯನ್ನು ಖರೀದಿಸಲಾಗುತ್ತದೆ. ನೋಂದಣಿ ಕಾರ್ಯ ೮೦ ದಿನಗಳವರೆಗೆ ನಡೆಯಲಿದ್ದು, ಖರೀದಿ ಪ್ರಕ್ರಿಯೆ ೯೦ ದಿನಗಳವರೆಗೆ ನಡೆಯಲಿದೆ ಎಂದು ತಿಳಿಸಿದರು.
ತೊಗರಿ ಖರೀದಿಯಲ್ಲಿ ಗುಣಮಟ್ಟ ಹಾಗೂ ಶೇ.೧೨ ರಷ್ಟು ತೇವಾಂಶ ಪರೀಕ್ಷೆ ಮಾಡಲಾಗುತ್ತದೆ. ಜಿಲ್ಲೆಯ ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ ಒಟ್ಟು ೪ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದ್ದು, ಎಲ್ಲಾ ರೈತರು ಖರೀದಿ ಕೇಂದ್ರಗಳ ಸ್ಥಳಗಳಲ್ಲಿ ನೋಂದಣಿ ಸಮಯದಲ್ಲಿ ಆಧಾರ ಕಾರ್ಡ, ಪಹಣಿ ಪತ್ರಿಕೆ, ಆಧಾರ ಲಿಂಕ್ ಆಗಿರುವ ರಾಷ್ಟ್ರೀಕೃತ ಬ್ಯಾಂಕಿನ ಪಾಸ್‌ಬುಕ್ ಜರಾಕ್ಸ್ ಪ್ರತಿ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಎಪಿಎಂಸಿ ಕಾರ್ಯದರ್ಶಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಜಾವಿದ ನಸೀಮಾ ಖಾನಂ, ಕೃಷಿ ಮಾರುಕಟ್ಟೆ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಕರ್ನಾಟಕ ಮಾರ್ಕೆಟಿಂಗ್ ಪೇಡರೇಷನ್ ಮ್ಯಾನೇಜರ್ ಮಾನಸ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net