ಮಳೆ ನಡುವೆಯೇ ಸಂಚಾರ ತಡೆ

ಹುಮನಾಬಾದ್​ ತಾಲೂಕಿನ ಹಳ್ಳಿಖೇಡ(ಕೆ)ದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಬಸ್ಸಿಗಾಗಿ ವಿದ್ಯಾರ್ಥಿಗಳು ಮಳೆಯಲ್ಲಿಯೇ ಕೆಲ ಕಾಲ ಸಂಚಾರ ತಡೆ ನಡೆಸಿ ಪ್ರತಿಭಟಿಸಿದರು.
ಹುಮನಾಬಾದ್​ ತಾಲೂಕಿನ ಹಳ್ಳಿಖೇಡ(ಕೆ)ದ ರಾಜ್ಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ಬಸ್ಸಿಗಾಗಿ ವಿದ್ಯಾರ್ಥಿಗಳು ಮಳೆಯಲ್ಲಿಯೇ ಕೆಲ ಕಾಲ ಸಂಚಾರ ತಡೆ ನಡೆಸಿ ಪ್ರತಿಭಟಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಹಳ್ಳಿಖೇಡ(ಕೆ)ದಲ್ಲಿ ಬಸ್​ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ
ಹುಮನಾಬಾದ್​: ಸಂಜೆ ವೇಳೆಗೆ ಸಮರ್ಪಕ ಬಸ್​ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಾಲೂಕಿನ ಹಳ್ಳಿಖೇಡ್​(ಕೆ) ಗ್ರಾಮದ ಶಾಲೆಗಳಿಗೆ ಆಗಮಿಸುವ ಮುಸ್ತಾಪುರ ಹಾಗೂ ವಾಡಿ ಗ್ರಾಮಗಳ ವಿದ್ಯಾರ್ಥಿಗಳು ಬುಧವಾರ ಸಂಜೆ ಮಳೆ ನಡುವೆಯೇ ಕೆಲ ಸಮಯ ಸಂಚಾರ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಶಾಲೆ ಮುಗಿದ ಬಳಿಕ ಸಂಜೆ 4.30ರಿಂದ 7ರವರೆಗೆ ಬಸ್​ ಬಾರದೆ ವಿದ್ಯಾರ್ಥಿಗಳು ಮಳೆಯಲ್ಲೇ ರಸ್ತೆ ಬದಿಯಲ್ಲಿ ಕಾಯುವಂತಾಯಿತು. ಸಾರಿಗೆ ಇಲಾಖೆಯ ರ್ನಿಲಕ್ಷ$್ಯ ಖಂಡಿಸಿ ವಿದ್ಯಾರ್ಥಿಗಳು ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾನಿರತ ವಿದ್ಯಾರ್ಥಿಗಳು ಮಾತನಾಡಿ, ಶಾಲೆಗಳು ಆರಂಭವಾದ ದಿನದಿಂದಲೂ ಪ್ರತಿನಿತ್ಯ ಇದೇ ಸಮಸ್ಯೆ ಎದುರಾಗುತ್ತಿದೆ. ಸಂಜೆ ಸಮಯಕ್ಕೆ ಬಸ್​ ಸಿಗದ ಕಾರಣ ರಾತ್ರಿ 8 ಗಂಟೆಯಾದರೂ ಮನೆ ತಲುಪಲು ಸಾಧ್ಯವಾಗುತ್ತಿಲ್ಲ. ಮಳೆ, ಕತ್ತಲೆ ಹಾಗೂ ಸುರಕ್ಷತಾ ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು, ಕೂಡಲೇ ಹೆಚ್ಚುವರಿ ಬಸ್​ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಜನಪ್ರತಿನಿಧಿಗಳು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ನಮ್ಮ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಮನವಿ ಮಾಡಿದರು. ಸ್ಥಳಿಯರು ಹಾಗೂ ಪಾಲಕರು ವಿದ್ಯಾರ್ಥಿಗಳ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.
ಈ ಮಧ್ಯೆ ವಾಹನದಲ್ಲಿ ಹೋಗುತ್ತಿದ್ದ ಕಲಬುರಗಿಯ ಪೊಲೀಸ್​ ಅಧಿಕಾರಿಯೊಬ್ಬರು ಮಕ್ಕಳೊಂದಿಗೆ ಮಾತನಾಡಿ, ನಿಮ್ಮ ಸಮಸ್ಯೆ ಬಗ್ಗೆ ಸಂಬಂಧಿತರ ಗಮನಕ್ಕೆ ತರುತ್ತೇನೆ ಈಗ ಸಮಯವಾಗಿದ್ದು ಮಳೆಯಾಗುತ್ತಿದೆ ಎಂದು ಹೇಳಿದ್ದರಿಂದ ವಿದ್ಯಾರ್ಥಿಗಳು ಸಂಚಾರ ತಡೆ ಕೈಬಿಟ್ಟಿದ್ದಾರೆ ಎಂದು ಗ್ರಾಮಸ್ಥರಿಂದ ತಿಳಿದುಬಂದಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net