ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ,ಡಾ.ರಾಜ್‌ಕುಮಾರ್ ರಸ್ತೆ, ಡಾ.ವಿಷ್ಣುವರ್ದನ್ ರಸ್ತೆಯಲ್ಲಿ ನಿತ್ಯ ಎಲ್ಲಿಂದರಲ್ಲಿ ಬೈಕ್, ಕಾರು ಸೇರಿದಂತೆ ಇತರ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸಲಾಗುತ್ತಿದೆ. ಈ ರಸ್ತೆಗಳಲ್ಲಿ ಬ್ಯಾಂಕ್, ಹೋಟೆಲ್, ಮೆಡಿಕಲ್, ಬಟ್ಟೆ ಅಂಗಡಿ, ದಿನಸಿ ಅಂಗಡಿ, ಬಟ್ಟೆ ಅಂಗಡಿ.. ಹೀಗೆ ಎಲ್ಲ ರೀತಿಯ ಮಳಿಗೆಗಳಿವೆ. ಪ್ರತಿದಿನ ಪಟ್ಟಣ ಸೇರಿದಂತೆ ಗ್ರಾಮಾಂತರ ಪ್ರದೇಶದಿಂದ ಸಾವಿರಾರು ಜನರು ಭೇಟಿ ನೀಡುತ್ತಾರೆ. ಈ ವೇಳೆ ರಸ್ತೆಯ ಎರಡೂ ಬದಿಯಲ್ಲಿ ರಸ್ತೆಗೆ ಹೊಂದಿಕೊಂಡಂತೆ ವಾಹನಗಳನ್ನು ನಿಲ್ಲಿಸಿ ವ್ಯಾಪಾರ ವಹಿವಾಟು ಮಾಡುತ್ತಾರೆ. ಇದರಿಂದ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ.