ನೆಲಮಂಗಲದಿಂದ ನಗರದತ್ತ ಬರುವ ವಾಹನಗಳು ಕೆನ್ನಮೆಟಲ್ ಫ್ಯಾಕ್ಟರಿ ಬಳಿಯ ಮೇಲ್ಸೇತುವೆಯಿಂದ ಕೆಳಗೆ ಇಳಿದು, 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಮತ್ತು ಗೊರಗುಂಟೆಪಾಳ್ಯದ ಮೂಲಕ ಸಂಚರಿಸಬಹುದು ಎಂದು ಪೀಣ್ಯ ಸಂಚಾರ ಪೊಲೀಸರು ಮಾಹಿತಿ ನೀಡಿದ್ದಾರೆ.