ಕೆ-ಸೆಟ್ ಹಾಗೂ ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

,
,
Published on
ಕಲಬುರಗಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ನಡೆಸಲಿರುವ ರಾಜ್ಯಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯವೇತನ ಸಂಶೋಧನ ಸಹಾಯಕರ (ಜೆಆರ್‍ಎಫ್) ಅರ್ಹತಾ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.
ಆಸಕ್ತರು 2026ರ ಏಪ್ರಿಲ್ 24 ರೊಳಗಾಗಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944 ಗೆ ಸಂಪರ್ಕಿಸಬೇಕೆಂದು ಕುಲಸಚಿವ ಪ್ರೊ. ನವೀನ ಕುಮಾರ್ ಎಸ್.ಕೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net