ಮುಂದಿನ ವರ್ಷ ಟ್ರಕ್ ಟರ್ಮಿನಲ್ ಉದ್ಘಾಟನೆ

ಗುಂಡ್ಲುಪೇಟೆ ತಾಲೂಕಿನ ಚಿಕ್ಕತುಪ್ಪೂರು ಸಮೀಪದ ಟ್ರಕ್ ಟರ್ಮಿನಲ್ ಪ್ರದೇಶದ ಪ್ರವೇಶಕ್ಕೆ ಶಾಸಕ ಗಣೇಶ್ ಪ್ರಸಾದ್ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ರಾಮಲಿಂಗಾರೆಡ್ಡಿ, ಸಯ್ಯದ್ ಅಹಮದ್, ಶಿವಪ್ರಸಾದ್, ಎಚ್.ಎಸ್.ನಂಜಪ್ಪ, ಎಚ್.ಎಸ್.ನಂಜುಂಡ ಪ್ರಸಾದ್, ಕೆ.ಎಸ್.ಮಹೇಶ್, ಮಡಿವಾಳಪ್ಪ ಇದ್ದರು.
ಗುಂಡ್ಲುಪೇಟೆ ತಾಲೂಕಿನ ಚಿಕ್ಕತುಪ್ಪೂರು ಸಮೀಪದ ಟ್ರಕ್ ಟರ್ಮಿನಲ್ ಪ್ರದೇಶದ ಪ್ರವೇಶಕ್ಕೆ ಶಾಸಕ ಗಣೇಶ್ ಪ್ರಸಾದ್ ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿದರು. ರಾಮಲಿಂಗಾರೆಡ್ಡಿ, ಸಯ್ಯದ್ ಅಹಮದ್, ಶಿವಪ್ರಸಾದ್, ಎಚ್.ಎಸ್.ನಂಜಪ್ಪ, ಎಚ್.ಎಸ್.ನಂಜುಂಡ ಪ್ರಸಾದ್, ಕೆ.ಎಸ್.ಮಹೇಶ್, ಮಡಿವಾಳಪ್ಪ ಇದ್ದರು.
Published on
ಗುಂಡ್ಲುಪೇಟೆ: ಸರಕು ಸಾಗಾಣಿಕೆಯಲ್ಲಿ ಪ್ರಮುಖವಾಗಿರುವ ಲಾರಿಗಳ ನಿಲುಗಡೆಗೆ ಸರ್ಕಾರ ಟ್ರಕ್ ಟರ್ಮಿನಲ್ ನಿರ್ಮಿಸಿ ಚಾಲಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ತಾಲೂಕಿನ ಚಿಕ್ಕತುಪ್ಪೂರು ಸಮೀಪ ನಿರ್ಮಿಸಿರುವ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರದೇಶವನ್ನು ಬುಧವಾರ ವೀಕ್ಷಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಸಾವಿರಾರು ಟ್ರಕ್‌ಗಳಿದ್ದು ಇವುಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆಯಿದೆ. ಅತಿ ಹೆಚ್ಚಿನ ಸಂಚಾರ ದಟ್ಟಣೆಯಿರುವ ಬೆಂಗಳೂರು ಭಾಗದಲ್ಲಿ ಹಗಲಿನ ವೇಳೆಯಲ್ಲಿ ಟ್ರಕ್‌ಗಳು ಓಡಾಡಲು ಅವಕಾಶವಿಲ್ಲ. ಆದ್ದರಿಂದ ಡಿ.ದೇವರಾಜ ಅರಸು ಕಾಲದಲ್ಲಿ ಟ್ರಕ್ ಟರ್ಮಿನಲ್ ಅರಂಭಿಸಿದ್ದರಿಂದ ಚಾಲಕರಿಗೆ ಅನುಕೂಲವಾಗಿದೆ. ಈ ಭಾಗದಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸಲು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕಾರಣರಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸದ್ಯ ಟರ್ಮಿನಲ್‌ನಲ್ಲಿ ಉಚಿತವಾಗಿ ಲಾರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುವುದು, ಕಾಂಕ್ರೆಟ್ ರಸ್ತೆ ಮತ್ತು ಮೂಲಸೌಕರ್ಯಗಳನ್ನು ಕಲ್ಪಿಸಿದ ನಂತರ ಅದಕ್ಕೆ ಶುಲ್ಕ ಪಾವತಿ ವ್ಯವಸ್ಥೆ ಮಾಡಲಾಗುತ್ತದೆ. ಮೈಸೂರು, ಹುಬ್ಬಳ್ಳಿ ಧಾರವಾಡ, ದಾಂಡೇಲಿ ಮುಂತಾದ ಕಡೆಯಲ್ಲೂ ಟ್ರಕ್ ಟರ್ಮಿನಲ್ ಇದ್ದು ಕೆಲವು ಕಡೆ ಒತ್ತುವರಿಯಾಗಿದೆ. ಆದ್ದರಿಂದ ಮೊದಲು ಸುತ್ತುಗೋಡೆ ನಿರ್ಮಿಸಿ ಒತ್ತುವರಿ ತಡೆಗಟ್ಟಲಾಗುವುದು. ಮುಂದಿನ ವರ್ಷ ಇದನ್ನು ಉದ್ಘಾಟನೆ ಮಾಡಲಾಗುವುದು. ಸಾರಿಗೆ ಬಸ್‌ಗಳ ಕೊರತೆಯಿಂದ ನಾನಾ ತೊಂದರೆಯಾಗುತ್ತಿದೆ. ಬೆಂಗಳೂರು ಮೈಸೂರಿಗಳಿಗೆ ಬ್ಯಾಟರಿ ಚಾಲಿತ ಬಸ್‌ಗಳನ್ನು ನೀಡಲಾಗುತ್ತಿದೆ. ಆದ್ದರಿಂದ ಮುಂದಿನ ಬಾರಿ ಗುಂಡ್ಲುಪೇಟೆಗೆ ಹೆಚ್ಚಿನ ಹೊಸ ಬಸ್‌ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಗಣೇಶ್ ಪ್ರಸಾದ್ ಮಾತನಾಡಿ, ನಿರ್ಮಾಣ ಹಂತದ ಟ್ರಕ್ ಟರ್ಮಿನಲ್ ವೀಕ್ಷಣೆಗೆ ಸಚಿವರು ಆಗಮಿಸಿದ್ದಾರೆ. ಈ ಭಾಗದಲ್ಲಿ 13.6 ಎಕರೆ ಜಾಗದಲ್ಲಿ ಟ್ರಕ್ ಟರ್ಮಿನಲ್ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ರಸ್ತೆ, ಕುಡಿಯುವ ನೀರು ಡಾರ್ಮೆಟರಿ ಮುಂತಾದ ಮೂಲಸೌಕರ್ಯಗಳನ್ನು ಕಲ್ಪಿಸಿದ ನಂತರ ಮುಂದಿನ ದಿನಗಳಲ್ಲಿ ಟ್ರಕ್, ಲಾರಿ ಚಾಲಕರಿಗೆ ಹೆಚ್ಚಿನ ಉಪಯೋಗವಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಟ್ರಕ್ ಟರ್ಮಿನಲ್ ಅಧ್ಯಕ್ಷ ಸಯ್ಯದ್ ಅಹಮದ್, ಎಂಡಿ ಶಿವಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡ ಪ್ರಸಾದ್, ಜಿಪಂ ಮಾಜಿ ಉಪಾಧ್ಯಕ್ಷ ಕೆ.ಎಸ್.ಮಹೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಡಿವಾಳಪ್ಪ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net