ಗೋಕಾಕ ನಗರದ ಶ್ರೀ ಲಕ್ಷ$್ಮಣರಾವ್ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಹಾದೇವ ಖಾನಟ್ಟಿ, ಸನತ ಜಾರಕಿಹೊಳಿ, ಸುಭಾಸ ಬಿರಾದಾರಪಾಟೀಲ ಇತರರಿದ್ದರು.
ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಶಿಕ್ಷಕರ ಮಾರ್ಗದರ್ಶನದೊಂದಿಗೆ ಸಮಾಜದಲ್ಲಿ ಉನ್ನತ ಹುದ್ದೆ ಅಲಂಕರಿಸಬೇಕು ಎಂದು ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶ ಮಹಾದೇವ ಖಾನಟ್ಟಿ ಹೇಳಿದರು.
ಶ್ರೀ ಲಕ್ಷ$್ಮಣರಾವ್ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತದಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ಹೆಚ್ಚಿನ ಉದ್ಯೋಗಾವಕಾಶಗಳಿವೆ. ಅವಕಾಶ ಹಾಗೂ ಸಮಯ ಸದುಪಯೋಗಪಡಿಸಿಕೊಳ್ಳಬೇಕು. ಹಿರಿಯ ವಕೀಲರ ಮಾರ್ಗದರ್ಶನದಲ್ಲಿ ನಿರಂತರ ಅಧ್ಯಯನಶೀಲರಾಗುವ ಜತೆಗೆ ಪ್ರಾಮಾಣಿಕತೆ, ಪ್ರಯತ್ನಶಿಲರಾಗಿ ವೃತ್ತಿಯಲ್ಲಿ ಯಶಸ್ವಿಯಾಗಬೇಕೆಂದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ತಾಲೂಕು ವಕೀಲರ ಸಂದ ಅಧ್ಯ ಸುಭಾಸ ಬಿರಾದಾರಪಾಟೀಲ, ಪ್ರಾಚಾರ್ಯ