ಗ್ರಾಮ ಪಂಚಾಯಿತಿ ಆಡಳಿತಾತ್ಮಕ ಸುಧಾರಣೆ ಮತ್ತು ಪಾರದರ್ಶಕತೆ, ನೀರು ಸರಬರಾಜು ಮತ್ತು ಘನತ್ಯಾಜ್ಯ ನಿರ್ವಹಣೆಯ ವೈಜ್ಞಾನಿಕ ವಿಧಾನಗಳು, ಪಂಚಾಯತ್ ಉಪ ಸಮಿತಿಗಳ ಜವಾಬ್ದಾರಿಗಳು, ಮಹಿಳೆಯರು, ಮಕ್ಕಳು ಮತ್ತು ಅಂಗವಿಕಲ ವ್ಯಕ್ತಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನದ ಸಮರ್ಪಕ ಬಳಕೆ, ಪಂಚಾಯತ್ ರಾಜ್ ಇಲಾಖೆಯ ವಿವಿಧ ತಂತ್ರಾಂಶಗಳ ಬಳಕೆ ಮತ್ತು ನಿರ್ವಹಣೆ ಕುರಿತು ಕ್ಷೇತ್ರ ಮಟ್ಟದಲ್ಲಿ ಫೆಲೋಗಳ ಸಾಮರ್ಥ್ಯವರ್ಧನೆ ಮಾಡುವ ನಿಟ್ಟಿನಲ್ಲಿ ವಿವಿಧ ತಜ್ಞರು ಪ್ರಮುಖ ವಿಷಯಗಳ ಕುರಿತು ಉಪನ್ಯಾಸ ನೀಡಿದರು.