ಹೆದ್ದಾರಿಯಲ್ಲಿ ಇಬ್ಬರೂ ಬೈಕ್‌ನಲ್ಲಿ ಹೋಗುತ್ತಿದ್ದ ವೇಳೆ ಒನ್ ವೇದಲ್ಲಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರೂ ಕೆಳಗೆ ಬಿದ್ದು ಹಿಂದೆ ಇದ್ದ ಲಾರಿಯ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲು ಲಾರಿಯೇ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿತ್ತು. ಆದರೆ, ಸಿಸಿಟಿವಿ ಕ್ಯಾಮರಾದಿಂದ ಅಪಘಾತದ ಅಸಲಿಯತ್ತು ಗೊತ್ತಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.