ಮತಿನ್ಖಾನ್ ಶ್ರೀನಿವಾಸಪುರದ ನೂರ್ ಪಾಷಾಗೆ 1 ಕೆಜಿ 300ಗ್ರಾಂ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ, 1 ಕೆಜಿ 300 ಗ್ರಾಂ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚಿಗೆ ನೆರೆಯ ಆಂಧ್ರಪ್ರದೇಶದಿಂದ ಮುಳಬಾಗಿಲಿಗೆ ಹೆಚ್ಚಾಗಿ ಗಾಂಜಾ ಮತ್ತು ಅಮಲು ಪದಾರ್ಥಗಳು ಸರಬರಾಜಾಗುತ್ತಿರುವ ಮಾಹಿತಿ ಆಧರಿಸಿರುವ ಪೊಲೀಸರು ತೀವ್ರ ನಿಗಾವಹಿಸಿದ್ದು, ಆರೋಪಿಗಳ ಚಲನವಲನಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.