ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಎರಡು ಪ್ರತ್ಯೇಕ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು | Chitradurga
ಘಟನೆಯ ಸ್ಥಳ
Published on:
Copied
Follow Us
Chitradurga: ಚಿತ್ರದುರ್ಗ ಜಿಲ್ಲೆಯಲ್ಲಿ ಭಾನುವಾರ(ಜು. 12) ತಡರಾತ್ರಿ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ.
ಹೊಳಲ್ಕೆರೆ ತಾಲೂಕಿನ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಚಿತ್ರದುರ್ಗ ಮೂಲದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಲೋಹಿತ್ ಪ್ರಸಾದ್ ಹಾಗೂ ಅವರ ಪತ್ನಿ ನಿತ್ಯಶ್ರೀ ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮತ್ತೊಂದು ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಕೋನಾಪುರ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ವೊಂದು ಡಿವೈಡರ್ ಡಿಕ್ಕಿ ಹೊಡೆದು ಅಪಾಘತ ಸಂಭವಿಸಿದೆ. ಪರಿಣಾಮ ಬಸ್ ಚಾಲಕ ಮಹಮದ್ (45) ಮತ್ತು ಪ್ರಯಾಣಿಕರೊಬ್ಬರು ಅಸುನೀಗಿದ್ದಾರೆ.
ಚಳ್ಳಕೆರೆ ಕಡೆಯಿಂದ ಬಸ್ ಬಳ್ಳಾರಿ ಕಡೆ ತೆರುಳುತ್ತಿತ್ತು ಎನ್ನಲಾಗಿದೆ. ಬಸ್ನಲ್ಲಿದ್ದ 28ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ರಾಂಪುರ ಸರ್ಕಾರಿ ಆಸ್ಪತ್ರೆ ಮತ್ತು ಬಳ್ಳಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.