ಈ ಯೋಜನೆಯ ವಿಸೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಈಗಾಗಲೇ ತಾಂತ್ರಿಕ ಅನುಮೋದನೆ ಪಡೆಯಲಾಗಿದ್ದು, ಆಡಳಿತಾತ್ಮಕ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾಪನೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಯೋಜನೆಯಡಿ ೯ ಎಂಎಲ್ ಡಿ ಸಾಮರ್ಥ್ಯದ ಮಲಿನ ನೀರು ಸಂಸ್ಕರಣಾ ಘಟಕ (ಎಸ್‌ಟಿಪಿ) ಸ್ಥಾಪಿಸಲು ಉದ್ದೇಶಿಸಲಾಗಿದೆ. ಭೀಮಾ ನದಿ ಸಮೀಪದಲ್ಲಿ ವೆಟ್‌ವೆಲ್ ನಿರ್ಮಿಸಿ, ನಗರದ ವಿವಿಧ ಭಾಗಗಳಿಂದ ಹರಿಯುವ ಕೊಳಚೆ ನೀರು ಸಂಗ್ರಹಿಸಿ, ಪಂಪ್ ಮೂಲಕ ಎಸ್‌ಟಿಪಿಗೆ ರವಾನಿಸಿ ವೈಜ್ನಿನಿಕವಾಗಿ ಸಂಸ್ಕರಿಸಲು ಯೋಜಿಸಲಾಗಿದೆ. ಈ ವ್ಯವಸ್ಥೆ ಜಾರಿಯಾದಲ್ಲಿ ಪ್ರಸ್ತುತ ತೆರೆದ ಚರಂಡಿಗಳಿಂದ ನೇರವಾಗಿ ಭೀಮಾ ನದಿಗೆ ಸೇರುತ್ತಿರುವ ಕೊಳಚೆ ನೀರು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿದೆ ಎಂದರು.