ಡಿವೈಎಸ್ಪಿ ಲಕ್ಷ$್ಮಯ್ಯ ಮಾತನಾಡಿ, ಮಕ್ಕಳ ರಕ್ಷಣಾ ನೀತಿ 2016 ಪರಿಷತ ಮತ್ತು 2022ರ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಪಾಲಿಸಬೇಕಾದ ನಿಯಮ ಕುರಿತು ಪ್ರತಿ ಶಾಲೆ, ಕಾಲೇಜು ತನ್ನದೇ ಆದ ಲಿಖಿತ ಮಕ್ಕಳ ರಕ್ಷಣಾ ನೀತಿ ಹೊಂದಿರಬೇಕು. ಶಾಲಾ ಆವರಣದಲ್ಲಿ ದೈಹಿಕ, ಮಾನಸಿಕ, ಲೈಂಗಿಕ, ಭಾವನಾತ್ಮಕ ಹಿಂಸೆ, ಬೆದರಿಕೆ, ರ್ಯಾಗಿಂಗ್ ಹಾಗೂ ತಾರತಮ್ಯಕ್ಕೆ ಅವಕಾಶ ನೀಡಬಾರದು ಎಂದು ತಿಳಿಸಿದರು.