ಅನುದಾನ ಸಮರ್ಪಕವಾಗಿ ಬಳಸಿ

ವಿಜಯಪುರ ಜಿಲ್ಲಾಡಳಿತ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಅಂಗವಿಕಲರ ಕುಂದು-ಕೊರತೆಗಳ ಸಭೆ ನಡೆಸಿದರು. ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಕೆ, ಡಿಎಚ್‌ಒ ಡಾ. ಸಂಪತ್ ಗುಣಾರಿ ಇತರರಿದ್ದಾರೆ.
ವಿಜಯಪುರ ಜಿಲ್ಲಾಡಳಿತ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಅಂಗವಿಕಲರ ಕುಂದು-ಕೊರತೆಗಳ ಸಭೆ ನಡೆಸಿದರು. ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಕೆ, ಡಿಎಚ್‌ಒ ಡಾ. ಸಂಪತ್ ಗುಣಾರಿ ಇತರರಿದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಸೂಚನೆ
  • ಅಂಗವಿಕಲರ ಕುಂದು-ಕೊರತೆಗಳ ಸಭೆ
ವಿಜಯಪುರ: ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರಿಗೆ ಯಾವುದೇ ರೀತಿಯ ಅಡೆತಡೆ ಉಂಟಾಗದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ, ಅಂಗವಿಕಲರಿಗಾಗಿ ಮೀಸಲಿರುವ ಶೇ.5ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಅಂಗವಿಕಲರ ಕುಂದು-ಕೊರತೆಗಳ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗವಿಕಲರಿಗೆ ವಿವಿಧ ಇಲಾಖೆಗಳ ಮೂಲಕ ದೊರೆಯುವ ಸೌಲಭ್ಯಗಳು ಮತ್ತು ಯೋಜನೆಗಳ ಅನುಷ್ಠಾನ ಕುರಿತು ಪರಿಶೀಲನೆ ನಡೆಸಿದ ಅವರು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ನೀಡಲಾಗುವ ಬಸ್‌ಪಾಸ್ ವಿತರಣೆಯನ್ನು ಮತ್ತಷ್ಟು ಸರಳೀಕರಿಸುವಂತೆ ಸೂಚಿಸಿದರು.
ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಸೇರಿ ಎಲ್ಲ ಇಲಾಖೆಗಳ ಕಚೇರಿಗಳ ಸೂಚನಾ ಫಲಕಗಳಲ್ಲಿ ಅಂಗವಿಕಲರಿಗೆ ಮೀಸಲಿರುವ ಶೇ.5ರ ಅನುದಾನ ಹಾಗೂ ಸೌಲಭ್ಯಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಗೋಚರಿಸುವಂತೆ ಪ್ರದರ್ಶಿಸಬೇಕು ಎಂದು ಸೂಚಿಸಿದರು.
ಮಾಸಾಶನ (ಪಿಂಚಣಿ) ಸಂಬಂಧಿತ ಬಾಕಿ ಪ್ರಕರಣಗಳನ್ನು ಮುಂಬರುವ ಒಂದು ವಾರದೊಳಗೆ ವಿಲೇವಾರಿ ಮಾಡಿ ಅರ್ಹರಿಗೆ ಸೌಲಭ್ಯ ತಲುಪುವಂತೆ ಕ್ರಮವಹಿಸಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸೂಚಿಸಿದರು.
ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಆಧಾರ್ ಕಾರ್ಡ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ, ಅಗತ್ಯ ಸೇವೆಗಳು ಸುಲಭವಾಗಿ ದೊರೆಯುವಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಗೆ ಅನುಕೂಲವಾಗುವ ಅಂಗವಿಕಲರ ಸ್ನೇಹಿ ಸ್ನೇಹಿ ಶೌಚಗೃಹಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಕೆ, ಡಿಎಚ್‌ಒ ಡಾ. ಸಂಪತ್ ಗುಣಾರಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣನವರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಎ. ಉಪ್ಪಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ನಿರ್ಮಲ ಸುರಪುರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net