ಉತ್ತೂರ ಕೆಪಿಎಸ್ ಶಾಲೆ ಶೀಘ್ರ ಲೋಕಾರ್ಪಣೆ

ಮುಧೋಳ ತಾಲೂಕಿನ ಉತ್ತೂರ ಗ್ರಾಮದಲ್ಲಿ ಪಿಎಂಶ್ರೀ ಕೆಪಿಎಸ್ ಶಾಲೆಯ ನೂತನ ಕಟ್ಟಡದ ಅಂತಿಮ ಹಂತದ ಕಾಮಗಾರಿಯನ್ನು ಶಾಸಕ ಆರ್.ಬಿ. ತಿಮ್ಮಾಪೂರ ಪರಿಶೀಲಿಸಿದರು. ಪುಂಡಲೀಕ ನಿಂಬಾಳಕರ, ಮಹಾನಿಂಗಪ್ಪ ಚಿನಿವಾಲ, ಭೀಮು ರಬಕವಿ ಇತರರಿದ್ದರು.
ಮುಧೋಳ ತಾಲೂಕಿನ ಉತ್ತೂರ ಗ್ರಾಮದಲ್ಲಿ ಪಿಎಂಶ್ರೀ ಕೆಪಿಎಸ್ ಶಾಲೆಯ ನೂತನ ಕಟ್ಟಡದ ಅಂತಿಮ ಹಂತದ ಕಾಮಗಾರಿಯನ್ನು ಶಾಸಕ ಆರ್.ಬಿ. ತಿಮ್ಮಾಪೂರ ಪರಿಶೀಲಿಸಿದರು. ಪುಂಡಲೀಕ ನಿಂಬಾಳಕರ, ಮಹಾನಿಂಗಪ್ಪ ಚಿನಿವಾಲ, ಭೀಮು ರಬಕವಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಆರ್.ಬಿ. ತಿಮ್ಮಾಪೂರ ಹೇಳಿಕೆ
  • ಉಜ್ವಲ ಭವಿಷ್ಯಕ್ಕೆ ಗುಣಮಟ್ಟದ ಶಿಕ್ಷಣ

ಮುಧೋಳ: ತಾಲೂಕಿನ ಉತ್ತೂರದಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆ ಶೀಘ್ರದಲ್ಲೇ ಸುಸಜ್ಜಿತ ಕಟ್ಟಡದ ಕಾಮಗಾರಿ ಪೂರ್ಣಗೊಂಡು ವಿದ್ಯಾರ್ಥಿಗಳ ಬಳಕೆಗೆ ಮುಕ್ತವಾಗಲಿದೆ ಎಂದು ಶಾಸಕ, ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ನೂತನ ಕಟ್ಟಡದ ಅಂತಿಮ ಹಂತದ ಕಾಮಗಾರಿ ವೀಕ್ಷಿಸಿ, ಪ್ರಗತಿ ಹಾಗೂ ಗುಣಮಟ್ಟವನ್ನು ಪರಿಶೀಲಿಸಿ ಮಾತನಾಡಿದ ಅವರು, ಮಕ್ಕಳ ಮುಖದಲ್ಲಿನ ನಗು ಮತ್ತು ಉತ್ಸಾಹವೇ ನಾಡಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲು ತಮಗೆ ಇನ್ನಷ್ಟು ಪ್ರೇರಣೆ ನೀಡುತ್ತದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಗುಣಮಟ್ಟದ ಶಿಕ್ಷಣ ಮತ್ತು ಅತ್ಯುತ್ತಮ ಮೂಲ ಸೌಕರ್ಯ ಒದಗಿಸುವುದು ಸರ್ಕಾರದ ಹಾಗೂ ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದರು.
ಕ್ಷೇತ್ರದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಹೈಟೆಕ್ ಶಿಕ್ಷಣ ಸಿಗಬೇಕು ಎಂಬ ಸದುದ್ದೇಶದಿಂದ ಬೃಹತ್ ಶಾಲಾ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ನಿಗದಿತ ಗಡುವು ಒಳಗೆ ಕಾಮಗಾರಿಯನ್ನು ಸಂಪೂರ್ಣವಾಗಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.
ಮೊದಲ ಬಾರಿಗೆ ಸರ್ಕಾರಿ ಕಾಮರ್ಸ್ ಕಾಲೇಜು ಪ್ರಾರಂಭವಾಗಿದ್ದು, ಬಡವರು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪುಂಡಲೀಕ ನಿಂಬಾಳಕರ, ಮಹಾನಿಂಗಪ್ಪ ಚಿನಿವಾಲ, ಭೀಮು ರಬಕವಿ ಸೇರಿ ಸ್ಥಳೀಯ ಮುಖಂಡರು, ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net