ಕಾಲುಬಾಯಿ ಜ್ವರ ತಡೆಗೆ ಜಾನುವಾರುಗಳಿಗೆ ಲಸಿಕೆ ಹಾಕಿಸಿ

ನುಗ್ಗೇಹಳ್ಳಿ ಹೋಬಳಿ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರೇಕೆರೆ ಗ್ರಾಮದಲ್ಲಿ ಕಾಲುಬಾಯಿ ಜ್ವರಕ್ಕೆ ಉಚಿತವಾಗಿ ಲಸಿಕೆ ಹಾಕಲಾಯಿತು.
ನುಗ್ಗೇಹಳ್ಳಿ ಹೋಬಳಿ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರೇಕೆರೆ ಗ್ರಾಮದಲ್ಲಿ ಕಾಲುಬಾಯಿ ಜ್ವರಕ್ಕೆ ಉಚಿತವಾಗಿ ಲಸಿಕೆ ಹಾಕಲಾಯಿತು.
Published on
ನುಗ್ಗೇಹಳ್ಳಿ: ಹೋಬಳಿ ವ್ಯಾಪ್ತಿಯ ಜಾನುವಾರುಗಳಿಗೆ ತಪ್ಪದೇ ಉಚಿತವಾಗಿ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಿಸುವಂತೆ ರೈತರಿಗೆ ಡಾ. ಧನಂಜಯ್ ತಿಳಿಸಿದರು.
ಹೋಬಳಿ ಜಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕೆರೆ ಗ್ರಾಮದಲ್ಲಿ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಡಿ ಜಾನುವಾರುಗಳಿಗೆ ಲಸಿಕೆ ನೀಡಿ ಮಾತನಾಡಿದರು.
ಹೋಬಳಿ ವ್ಯಾಪ್ತಿಯಲ್ಲಿ ರೈತರು ಹೆಚ್ಚಾಗಿ ಹೈನೋದ್ಯಮಕ್ಕೆ ಅವಲಂಬಿತರಾಗಿದ್ದಾರೆ. ಹಸುಗಳ ಆರೋಗ್ಯದ ನಿರ್ವಹಣೆಯಲ್ಲಿ ವೈದ್ಯರ ಪಾತ್ರ ಮುಖ್ಯವಾಗಿದೆ. ಮಾರ್ಚ್ ನಂತರ ಹೆಚ್ಚಿನ ತಾಪಮಾನ ಉಂಟಾಗುವುದರಿಂದ ಹಸುಗಳು ಸೇರಿದಂತೆ ಜಾನುವಾರುಗಳಲ್ಲಿ ಕಾಲುಬಾಯಿ ಜ್ವರದ ಪ್ರಕರಣಗಳು ಹೆಚ್ಚಾಗುತ್ತವೆ. ಈ ಕಾಯಿಲೆಯಿಂದ ಹಸುಗಳು ಸಾವನ್ನಪ್ಪುವ ಮೊದಲೇ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪಶು ಇಲಾಖೆ ವತಿಯಿಂದ ಉಚಿತವಾಗಿ ಲಸಿಕೆ ಹಾಕಿಸುವ ಮೂಲಕ ಕಾಯಿಲೆಯನ್ನು ತಡೆಗಟ್ಟಲು ಕ್ರಮ ವಹಿಸಿದೆ ಎಂದರು.
ಅತ್ತಿಹಳ್ಳಿ ಪಶು ಇಲಾಖೆ ವ್ಯಾಪ್ತಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಹಸುಗಳಿಗೆ ಹಾಗೂ ಇತರೆ ಜಾನುವಾರಗಳಿಗೆ ಕಾಲುಬಾಯಿ ಜ್ವರಕ್ಕೆ ಈಗಾಗಲೇ ಲಸಿಕೆ ಹಾಕಲಾಗಿದೆ. ಹಳ್ಳಿಗಳಲ್ಲಿ, ತೋಟದ ಮನೆಗಳಲ್ಲಿ ವಾಸಿಸುವ ರೈತರು ಜಾನುವಾರುಗಳ ಕಾಯಿಲೆಯನ್ನು ತಡೆಗಟ್ಟುವ ದೃಷ್ಟಿಯಿಂದ ಸ್ವಯಂ ಪ್ರೇರಿತವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಭರತ್, ಪಶು ಸಖಿ ರಮ್ಯಾ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net