ವಡ್ಡಗೆರೆ ವೀರನಾಗಮ್ಮ ದೇಗುಲ ಕಳವು

Vaddagere Veera Nagamma temple theft
Vaddagere Veera Nagamma temple theft
Published on
ಕೊರಟಗೆರೆ: ತಾಲೂಕಿನ ಇತಿಹಾಸ ಪ್ರಸಿದ್ಧ ವಡ್ಡಗೆರೆ ಶ್ರೀ ವೀರನಾಗಮ್ಮ ದೇವಸ್ಥಾನದಲ್ಲಿ ಮಂಗಳವಾರ ತಡರಾತ್ರಿ ಕಳ್ಳತನ ನಡೆದಿದ್ದು, ಬೆಳ್ಳಿ ಹಾಗೂ ಬಂಗಾರದ ಒಡವೆಗಳನ್ನು ದೋಚಿದ್ದಾರೆ.
ಬುಧವಾರ ಮುಂಜಾನೆ ಪೂಜೆಗಾಗಿ ಅರ್ಚಕರು ದೇವಸ್ಥಾನಕ್ಕೆ ಬಂದಾಗ ಬಾಗಿಲು ಮುರಿದಿರುವುದು ಕಂಡುಬಂದಿದೆ. ಕೂಡಲೇ ಅವರು ಪೊಲೀಸ್​ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎಸ್ಪಿ ಕೆ.ವಿ.ಅಶೋಕ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಕೊರಟಗೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳ್ಳರು ಮೊದಲು ದೇವಸ್ಥಾನದ ವಿದ್ಯುತ್​ ಸಂಪರ್ಕ ಕಡಿತಗೊಳಿಸಿದ್ದಾರೆ. ಬಳಿಕ ಗ್ಯಾಸ್​ ಕಟರ್​ ಬಳಸಿ ದೇವಸ್ಥಾನದ ಮುಖ್ಯ ಬಾಗಿಲನ್ನು ತುಂಡರಿಸಿ ಒಳನುಗ್ಗಿದ್ದಾರೆ. ಸಾಕ್ಷ$್ಯ ನಾಶಪಡಿಸುವ ಉದ್ದೇಶದಿಂದ ದೇವಸ್ಥಾನದಲ್ಲಿದ್ದ ಸಿಸಿಟಿವಿಯ ಡಿವಿಆರ್​ ಹೊತ್ತೊಯ್ದಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net