ನಾಳೆಯಿಂದ ವಿವಿಧ ಸಾಸ್ಕೃತಿಕ ಕಾರ್ಯಕ್ರಮಗಳು

 ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ, ಜಿಲ್ಲೆ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿ.ಪ. ಸದಸ್ಯ ಪಿ.ಎಚ್. ಪೂಜಾರ, ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕ ವಿಠಲ ಕಟಕದೊಂಡ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿಕಟಪೂರ್ವ ಅಧ್ಯಕ್ಷ ಸಚ್ಚಿ
ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ, ಜಿಲ್ಲೆ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿ.ಪ. ಸದಸ್ಯ ಪಿ.ಎಚ್. ಪೂಜಾರ, ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕ ವಿಠಲ ಕಟಕದೊಂಡ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿಕಟಪೂರ್ವ ಅಧ್ಯಕ್ಷ ಸಚ್ಚಿ
Published on

ಪ್ರಮುಖ ಮುಖ್ಯಾಂಶಗಳು

  • ವಿಡಿಎ ಮಾಜಿ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹೇಳಿಕೆ
  • ದಿವಟಗೇರಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುವರ್ಣ ಮಹೋತ್ಸವ
ವಿಜಯಪುರ: ನಗರದ ದಿವಟಗೇರಿ ಓಣಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸ್ಥಾಪನೆಯ 50ನೇ ವರ್ಷದ ಪರಿಪೂರ್ಣತೆಯ ಅಂಗವಾಗಿ ಸುವರ್ಣ ಮಹೋತ್ಸವ ನಿಮಿತ್ತ ಡಿ.5 ರಿಂದ ಮೂರು ದಿನಗಳವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮಠದ ಆಡಳಿತ ಮಂಡಳಿ ಅಧ್ಯಕ್ಷ, ವಿಡಿಎ ಮಾಜಿ ಅಧ್ಯಕ್ಷ ಶ್ರೀಹರಿ ಗೊಳಸಂಗಿ ಹೇಳಿದರು.
ಮಠದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರಬಾರ ಶಾಲೆ ಒಳಾಂಗಣ ಕ್ರೀಡಾಂಗಣದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಡಿ.5 ರಂದು ಸಂಜೆ 6ಕ್ಕೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಜೆ 7ಕ್ಕೆ ಮೈಸೂರಿನ ರಾಮಚಂದ್ರಾಚಾರ್ಯರಿಂದ ದಾಸವಾಣಿ, ರಾತ್ರಿ 8.30ಕ್ಕೆ ಪಂ. ಮಧ್ವಾಚಾರ್ಯ ಮೊಕಾಶಿ ಅವರಿಂದ ಆಶೀರ್ವಚನ ನಡೆಯಲಿದೆ. ಡಿ.6 ರಂದು ಸಂಜೆ 6ಕ್ಕೆ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಾನ್ನಿಧ್ಯವನ್ನು ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳು ಮತ್ತು ಕೂಡಲಿ ಮಠದ ಶ್ರೀ ರಘು ವಿಜಯತೀರ್ಥ ಶ್ರೀಪಾದಂಗಳು ವಹಿಸುವರು. ಅಂದೇ ಸಂಜೆ 7ಕ್ಕೆ ಕಲಬುರಗಿಯ ವಿದ್ಯಾಧೀಶ ಅವರಿಂದ ದಾಸವಾಣಿ, ಸಂಜೆ 8ಕ್ಕೆ ಪಂ. ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ ಅವರಿಂದ ಪ್ರವಚನ ನಡೆಯಲಿದೆ ಎಂದರು. ನಂತರ 8.30ಕ್ಕೆ ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳು ಮತ್ತು ಕೂಡಲಿ ಮಠದ ಶ್ರೀ ರಘುವಿಜಯತೀರ್ಥ ಶ್ರೀಪಾದಂಗಳವರು ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಅಯೋಧ್ಯಾ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಉಸ್ತುವಾರಿ ಗೋಪಾಲ ಜೀ, ಸಂಸದ ರಮೇಶ ಜಿಗಜಿಣಗಿ, ಮಾಜಿ ಅಡ್ವೋಕೇಟ್ ಜನರಲ್ ಹಾಗೂ ಅಖಿಲ ಭಾರತ ಬ್ರಾಹ್ಮಣ ಮಹಾಸಭಾದ ನಿಕಟಪೂರ್ವ ಅಧ್ಯಕ್ಷ ಅಶೋಕ ಹಾರನಹಳ್ಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಆರ್‌ಎಸ್‌ಎಸ್ ಪ್ರಮುಖ ಅರವಿಂದರಾವ ದೇಶಪಾಂಡೆ, ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ, ಜಲಸಂಪನ್ಮೂಲ ಇಲಾಖೆಯ ತಾಂತ್ರಿಕ ಸಲಹೆಗಾರ ಅನೀಲಕುಮಾರ ಮರಳಿ, ವಿಪ ಸದಸ್ಯರಾದ ಹನುಮಂತ ನಿರಾಣಿ, ಸುನೀಲಗೌಡ ಪಾಟೀಲ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ವಿಪ ಮಾಜಿ ಸದಸ್ಯ ಅರುಣ ಶಹಾಪುರ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಆಗಮಿಸುವರೆಂದು ತಿಳಿಸಿದರು.
ಸಾಂಸ್ಕೃತಿಕ ವೈಭವ :
ಡಿ.7 ರಂದು ಸಂಜೆ 6ಕ್ಕೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7ಕ್ಕೆ ಮುಂಬಯಿ ಸತ್ಯಧಾನ ವಿದ್ಯಾಪೀಠದ ಕುಲಪತಿ ಪಂ. ಡಾ. ವಿದ್ಯಾಸಿಂಹಾಚಾರ್ಯ ಮಾಹುಲಿ ಪ್ರವಚನ ನೀಡುವರು. ಸಂಜೆ 7.30ಕ್ಕೆ ಗಣ್ಯರಿಗೆ ಸನ್ಮಾನ, ಆಶೀರ್ವಚನ, 8.30ಕ್ಕೆ ಸೇವಾಕರ್ತರಿಗೆ ಸನ್ಮಾನ ಸೇರಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ, ಜಿಲ್ಲೆ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ವಿ.ಪ. ಸದಸ್ಯ ಪಿ.ಎಚ್. ಪೂಜಾರ, ಜಯನಗರ ಶಾಸಕ ಸಿ.ಕೆ. ರಾಮಮೂರ್ತಿ, ಶಾಸಕ ವಿಠಲ ಕಟಕದೊಂಡ, ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನಿಕಟಪೂರ್ವ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಮಾಜಿ ಶಾಸಕ ನಿರ್ಮಲಕುಮಾರ ಸುರಾನಾ, ಸಿನ್‌ಫಿನಿಟಿ ಮ್ಯಾನೇಜಮೆಂಟ್ ಕನ್ಸ್ಲ್ಟೆಂಟ್ ಮುಖ್ಯಸ್ಥ ದಿಲೀಪ ಸತ್ಯ, ಮೇಯರ್ ಎಂ.ಎಸ್. ಕರಡಿ ಹಾಗೂ ಪಾಲಿಕೆ ಸದಸ್ಯ ಕಿರಣ ಪಾಟೀಲ ಆಗಮಿಸುವರು. ಕೊನೆಗೆ ದಿಲೀಪ ಸತ್ಯ ಅವರು 15 ಬಡ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ಉಚಿತವಾಗಿ ವಿತರಿಸಲಿದ್ದಾರೆ ಎಂದು ವಿವರಿಸಿದರು.
ಶ್ರೀಮಠದ ಕಾರ್ಯದರ್ಶಿ ಶ್ರೀನಿವಾಸ ಬೇಟಗೇರಿ, ಪ್ರಮುಖರಾದ ಕೃಷ್ಣಾ ಗುನ್ನಾಳಕರ, ಉಪೇಂದ್ರ ದೇಸಾಯಿ, ವಿಕಾಸ ಪದಕಿ, ವಿಜಯ ಜೋಶಿ, ವಿಲಾಸ ಕುಲಕರ್ಣಿ, ವಾಮನ ಕುಲಕರ್ಣಿ, ಜ್ಞಾನೇಶ್ವರ ಕುಲಕರ್ಣಿ ಇತರರಿದ್ದರು.
-ೆÇÃಟೋ : ಎಂಎA 3-9
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net