ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ನಾಳೆ

ದೇವರಹಿಪ್ಪರಗಿ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಮಾತನಾಡಿದರು. ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರಹಮ್ಮದ ಬೇಪಾರಿ, ಬಾಳನಗೌಡ ಪಾಟೀಲ ಇತರರಿದ್ದರು.
ದೇವರಹಿಪ್ಪರಗಿ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಮಾತನಾಡಿದರು. ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರಹಮ್ಮದ ಬೇಪಾರಿ, ಬಾಳನಗೌಡ ಪಾಟೀಲ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಮಾಹಿತಿ
  • ಬ್ಲಾಕ್‌ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಭೆ
ದೇವರಹಿಪ್ಪರಗಿ: ಪಟ್ಟಣದಲ್ಲಿ ಮೇ 2ರಂದು ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಮಾಡುವ ಜತೆಗೆ ಬ್ಲಾಕ್‌ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಪ್ರಭುಗೌಡ ಲಿಂಗದಳ್ಳಿ ಹೇಳಿದರು.
ಇಲ್ಲಿನ ಪ್ರವಾಸಿಮಂದಿರದಲ್ಲಿ ಗುರುವಾರ ಸಂಜೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ಗಂಟೆಗೆ ಪಡಗಾನೂರ ಕ್ರಾಸ್‌ದಿಂದ ಡಾ. ಅಂಬೇಡ್ಕರ ವೃತ್ತದವರೆಗೆ ಬೈಕ್ ರ‌್ಯಾಲಿ ಮೂಲಕ ಸಚಿವ ಡಾ. ಎಂ.ಬಿ.ಪಾಟೀಲ ಅವರನ್ನು ದೇವರಹಿಪ್ಪರಗಿಗೆ ಕರೆತರಲಾಗುವುದು. ಡಾ. ಅಂಬೇಡ್ಕರ ಮೂರ್ತಿಗೆ ಮಾಲಾರ್ಪಣೆ ಮಾಡಿ, ನೂತನ ಪಟ್ಟಣ ಪಂಚಾಯತಿ ಕಟ್ಟಡ ಉದ್ಘಾಟಿಸಿ, ನಂತರ ಹೊಸನಗರದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಮಾಡಲಿದ್ದಾರೆ.
ನಂತರ ಮಧ್ಯಾಹ್ನ ಒಂದು ಗಂಟೆಗೆ ಪರದೇಶಿಮಠದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಕಾರ್ಯಕರ್ತರ ಸಭೆ ನಡೆಯಲಿದೆ. ಸಭೆಯಲ್ಲಿ ಬ್ಲಾಕ್ ಘಟಕದ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು, ಬಿಎಲ್‌ಎಗಳ ಮಹತ್ವದ ಸಭೆ ನಡೆಸಲಿದ್ದಾರೆ. ಈ ಎಲ್ಲ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಸುದ್ದಿಗೋಷ್ಠಿಯಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸುಭಾಷ ಛಾಯಾಗೋಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರಹಮ್ಮದ ಬೇಪಾರಿ, ಹೂವಿನಹಿಪ್ಪರಗಿ ಬ್ಲಾಕ್ ಅಧ್ಯಕ್ಷ ಬಾಳನಗೌಡ ಪಾಟೀಲ, ಮುಖಂಡರಾದ ಮುನೀರಹಮ್ಮದ ಬಿಜಾಪೂರ, ಮುರ್ತುಜ ತಾಂಬೋಳಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net