ಬೆಂಗಳೂರಿನ ಲೋಕಭವನದ ಬಳಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ 'ಮನರೇಗಾ ಬಚಾವ್ ಸಂಗ್ರಾಮ್" ಅಂಗವಾಗಿ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರು, ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು, ಕೇಂದ್ರಸರ್ಕಾರವು ಮನರೇಗಾ ಕಾಯ್ದೆ ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಯನ್ನು ಜಾರಿಗೊಳಿಸಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜನಪರ ಚಿಂತನೆಯಿಂದ ಜಾರಿಗೊಂಡ ಮನರೇಗಾ ಯೋಜನೆಯಡಿ ಬಡವರು, ಸಣ್ಣರೈತರು, ಮಹಿಳೆಯರು 100 ದಿನಗಳ ಕಾಲ ಕೆಲಸವನ್ನು ಖಾತ್ರಿಪಡಿಸುತ್ತಿತ್ತು. ಬಡವರಿಗೆ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಸಂವಿಧಾನಬದ್ಧವಾದ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂದರು.