ಬಡ ಕುಟುಂಬಗಳಿಗೆ ವಿಬಿ-ಜಿ- ರಾಮ್​- ಜಿ ಪೂರಕ

ಹುಲಸೂರು  ತಾಲೂಕಿನ ಗಡಿಗೌಡಗಾಂವ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿಬಿ-&ಜಿ- ರಾಮ್​- ಜಿ ಕಾಮಗಾರಿ ಸ್ಥಳಕ್ಕೆ ತಹಸೀಲ್ದಾರ್​ ಶಿವಾನಂದ ಮೇತ್ರೆ ಭೇಟಿ ನೀಡಿ ಪರಿಶೀಲಿಸಿದರು. ಪಿಡಿಒ ಬಸವರಾಜ ಬಾಲಕುಂದೆ ಇತರರಿದ್ದರು.
ಹುಲಸೂರು ತಾಲೂಕಿನ ಗಡಿಗೌಡಗಾಂವ ಗ್ರಾಪಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿಬಿ-&ಜಿ- ರಾಮ್​- ಜಿ ಕಾಮಗಾರಿ ಸ್ಥಳಕ್ಕೆ ತಹಸೀಲ್ದಾರ್​ ಶಿವಾನಂದ ಮೇತ್ರೆ ಭೇಟಿ ನೀಡಿ ಪರಿಶೀಲಿಸಿದರು. ಪಿಡಿಒ ಬಸವರಾಜ ಬಾಲಕುಂದೆ ಇತರರಿದ್ದರು.
Published on
ಹುಲಸೂರು: ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ವಿಬಿ&ಜಿ- ರಾಮ್​- ಜಿ ಯೋಜನೆ ಪೂರಕವಾಗಿದೆ ಎಂದು ಗ್ರಾಪಂ ಆಡಳಿತಾಧಿಕಾರಿ, ತಹಸೀಲ್ದಾರ್​ ಶಿವಾನಂದ ಮೇತ್ರೆ ಹೇಳಿದರು. ತಾಲೂಕಿನ ಗಡಿಗೌಡಗಾಂವ ಗ್ರಾಪಂ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ವಿಬಿ&ಜಿ- ರಾಮ್​- ಜಿ ಯೋಜನೆ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಕಾಮಗಾರಿಗಳ ಪ್ರಗತಿ ಹಾಗೂ ಗುಣಮಟ್ಟ ಪರಿಶೀಲಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಶಾಶ್ವತ ಆಸ್ತಿಗಳ ನಿಮಾರ್ಣ, ಪರಿಸರ ಸಂರಕ್ಷಣೆ, ನೈಸರ್ಗಿಕ ಸಂಪನ್ಮೂಲಗಳ ಅಭಿವೃದ್ಧಿ ಹಾಗೂ ಗ್ರಾಮೀಣ ಮೂಲ ಸೌಕಯವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿವೆ. ಸರ್ಕಾರದ ಮಾರ್ಗಸೂಚಿಯಂತೆ ಕಾಮಗಾರಿ ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು. ಸಾರ್ವಜನಿಕರಿಂದ ದೂರು ಬರೆದ ಹಾಗೆ ನೋಡಿಕೊಳ್ಳಬೇಕು. ಕೂಲಿ ಕಾರ್ಮಿಕರಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸುವ ಜತೆಗೆ ಕಾಮಗಾರಿಗಳಲ್ಲಿ ಯಾವುದೇ ರ್ನಿಲಕ್ಷ್ಯಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು. ಯೋಜನೆ ಬಗ್ಗೆ ಅಧಿಕಾರಿ ಹಾಗೂ ಸಂಬಂಧಪಟ್ಟವರಿಗೆ ಅಗತ್ಯ ಸಲಹೆ-ಸೂಚನೆ ನೀಡಿದರು. ಗಡಿಗೌಡಗಾಂವ ಪಿಡಿಒ ಬಸವರಾಜ ಬಾಲಕುಂದೆ, ಗ್ರಾಪಂ ಸಿಬ್ಬಂದಿ ಹಾಗೂ ಕೂಲಿ ಕಾರ್ಮಿಕರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net