ವೀರಶೈವ ಧರ್ಮದ ಮಹತ್ವ ಅಪಾರ

ಬೈಲಹೊಂಗಲದಲ್ಲಿ ಹಮ್ಮಿಕೊಂಡಿದ್ದ ಧರ್ಮಸಭೆ ಯನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಉದ್ಘಾಟಿಸಿದರು. ಪ್ರಭುನೀಲಕಂಠ ಸ್ವಾಮೀಜಿ, ಶಾಸಕ ಮಹಾಂತೇಶ ಕೌಜಲಗಿ, ಡಾ.ಮಹಾಂತಯ್ಯಶಾಸ್ತ್ರಿ ಇತರರಿದ್ದರು.
ಬೈಲಹೊಂಗಲದಲ್ಲಿ ಹಮ್ಮಿಕೊಂಡಿದ್ದ ಧರ್ಮಸಭೆ ಯನ್ನು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಉದ್ಘಾಟಿಸಿದರು. ಪ್ರಭುನೀಲಕಂಠ ಸ್ವಾಮೀಜಿ, ಶಾಸಕ ಮಹಾಂತೇಶ ಕೌಜಲಗಿ, ಡಾ.ಮಹಾಂತಯ್ಯಶಾಸ್ತ್ರಿ ಇತರರಿದ್ದರು.
Published on
ಬೈಲಹೊಂಗಲ: ತನ್ನದೆಯಾದ ಮಹತ್ವ ಹೊಂದಿರುವ ವೀರಶೈವ ಧರ್ಮವನ್ನು ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವುದು ನಮ್ಮೆಲ್ಲರ ಕರ್ತವ್ಯಎಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಹೇಳಿದರು.
ನಗರದ ಶಿವಬಸವ ಕಲ್ಯಾಣ ಮಂಟಪದಲ್ಲಿ ಯಡೂರು ವೀರಭದ್ರೇಶ್ವರ ದೇವಸ್ಥಾನದ ಸಹಸ್ರ ಕುಂಭಾಭಿಷೇಕ, ಲಕ್ಷ ದಿೋತ್ಸವ ಹಾಗೂ ರಾಜಗೋಪುರ ಲೋಕಾರ್ಪಣೆ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಆಶೀರ್ವಚನ ನೀಡಿದರು.
ವೀರಶೈವ ಧರ್ಮದಲ್ಲಿ ಜನಿಸಿದ ನಾವೆಲ್ಲ ಪುಣ್ಯವಂತರು. ಈ ಧರ್ಮ ಉಳಿಸಿ, ಬೆಳೆಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ಪಂಚಪೀಠಗಳು ನಿರಂತರವಾಗಿ ಶ್ರಮಿಸುತ್ತಿವೆ ಎಂದು ತಿಳಿಸಿದರು. ಯಡೂರು ಶ್ರೀ ವೀರಭದ್ರೇಶ್ವರ ದೇವಸ್ಥಾನದ ವಿವಿಧ ಕಾರ್ಯಕ್ರಮ ನಿಮಿತ್ತ ಧರ್ಮ ಜಾಗೃತಿಗಾಗಿ ಬೈಲಹೊಂಗಲ ನಗರದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸುವಲ್ಲಿ ಮೂರುಸಾವಿರ ಮಠದ ಪ್ರಭು ನೀಲಕಂಠ ಸ್ವಾಮೀಜಿ, ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ ಹಾಗೂ ಭಕ್ತರ ಕಾರ್ಯ ಶ್ಲಾನೀಯ ಎಂದರು.
ಸಹಸ್ರಾರು ಭಕ್ತರಿಗೆ ರುದ್ರಾ ಹಾಗೂ ಲಿಂಗಾಧರಣೆ ಜರುಗಿತು. ಮೂರುಸಾವಿರ ಮಠದ ಪ್ರಭುನೀಲಕಂಠ ಸ್ವಾಮೀಜಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಡಾ.ಮಹಾಂತಯ್ಯಶಾಸ್ತ್ರಿ ಆರಾದ್ರಿಮಠ, ಶಾಸಕ ಮಹಾಂತೇಶ ಕೌಜಲಗಿ, ಮಾಜಿ ಶಾಸಕರಾದ ಜಗದೀಶ ಮೆಟಗುಡ್ಡ, ಡಾ.ವಿಶ್ವನಾಥ ಪಾಟೀಲ, ಜೆಡಿಎಸ್​ ಜಿಲ್ಲಾಧ್ಯ ಶಂಕರ ಮಾಡಲಗಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net