ದೊಡ್ಡಬಳ್ಳಾಪುರ ನಗರಸಭೆ ನೂತನ ಉಪಾಧ್ಯಕ್ಷರಾಗಿ ಬಂತಿ ವೆಂಕಟೇಶ ಆಯ್ಕೆಯಾದರು. ಸಂಸದ ಡಾ.ಕೆ. ಸುಧಾಕರ್, ಶಾಸಕ ಧೀರಜ್ ಮುನಿರಾಜು, ನಗರಸಭೆ ಅಧ್ಯಕ್ಷೆ ಸುಮಿತ್ರಾ, ಸದಸ್ಯರು, ಜೆಡಿಎಸ್ ಮುಖಂಡರು ಇದ್ದರು.
Published on:
Copied
Follow Us
ದೊಡ್ಡಬಳ್ಳಾಪುರ : ನಗರಸಭೆ ಉಪಾಧ್ಯಕ್ಷರಾಗಿ ಬಿಜೆಪಿ ಸದಸ್ಯ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆಯಾಗಿದ್ದಾರೆ. ಮಲ್ಲೇಶ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಸೋಮವಾರ ಚುನಾವಣೆ ನಡೆಯಿತು,
ಬಿಜೆಪಿಯಿಂದ ವೆಂಕಟೇಶ್ (ಬಂತಿ) ಉಪಾಧ್ಯಕ್ಷ ಸ್ಥಾನದ ಕಣದಲ್ಲಿದ್ದರು, 31 ಸದಸ್ಯರ ಬಲವಿರುವ ನಗರಸಭೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ವೆಂಕಟೇಶ್ ಏಕೈಕ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಹೀಗಾಗಿ ಚುನಾವಣಾಧಿಕಾರಿಯಾಗಿ ಟಿ.ಆರ್ ಮಂಜುನಾಥ ಆಯ್ಕೆ ಘೋಷಿಸಿದರು.
ಶಾಸಕ ಧೀರಜ್ ಮುನಿರಾಜು ಮಾತನಾಡಿ, ಎನ್ಡಿಎ ಮೈತ್ರಿಯಂತೆ ಮುಂದಿನ ದಿನಗಳಲ್ಲಿ ಅಧ್ಯಕ್ಷ ಸ್ಥಾನವನ್ನು ಜೆಡಿಎಸ್ಗೆ ಬಿಟ್ಟುಕೊಡಲಾಗುವುದು. ಪಕ್ಷದ ಸದಸ್ಯರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರದ ಮೂಲಭೂತಸೌಕರ್ಯ ಸೇರಿದಂತೆ ಜ್ವಲಂತ ಸಮಸ್ಯೆ ಬಗೆಹರಿಸಲು ಶ್ರಮಿಸಲಿ ಎಂದರು.
ಕಣದಿಂದ ಹಿಂದೆ ಸರಿದ ಕಾಂಗ್ರೆಸ್ : ನಗರಸಭೆಯಲ್ಲಿ 9 ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ಇದೇ ಮೊದಲ ಬಾರಿಗೆ ಸ್ಪರ್ಧಾ ಕಣದಿಂದಲೇ ಹಿಂದೆ ಸರಿಯಿತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಗಳಲ್ಲಿ ಪಕ್ಷೇತರರು ಬೆಂಬಲದೊಂದಿಗೆ ಸ್ಪರ್ಧೆಗೆ ಇಳಿದಿತ್ತು. ಈ ಬಾರಿ ಕಣದಿಂದ ಹಿಂದೆ ಸರಿದಿರುವುದು ಆಶ್ಚರ್ಯ ಮೂಡಿಸಿದೆ.