ವಿಜಿ ಜಿ ರಾಮ್ ಜಿಯಡಿ ಉದ್ಯೋಗ ಗ್ಯಾರಂಟಿ

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರುತಿ ಶ್ರಮದಾನದ ಮೂಲಕ ಪರಿಶೀಲಿಸಿದರು.
ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ಕೈಗೊಂಡಿರುವ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರುತಿ ಶ್ರಮದಾನದ ಮೂಲಕ ಪರಿಶೀಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ
  • ತೆರಕಣಾಂಬಿ ಗ್ರಾಮ

ಗುಂಡ್ಲುಪೇಟೆ:

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ಕೈಗೊಂಡಿರುವ ಉಪಾಧ್ಯಾಯರ ಕಟ್ಟೆ ಅಭಿವೃದ್ಧಿ ಕಾಮಗಾರಿಯನ್ನು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ ಪರಿಶೀಲಿಸಿದರು.

ಯೋಜನೆ ಗ್ರಾಮೀಣ ಭಾಗದಲ್ಲಿ ಉದ್ಯೋಗ ಸೃಷ್ಟಿಸಲು ಅನುಕೂಲವಾಗಿದೆ. ಯೋಜನೆಯಡಿ ವಾರ್ಷಿಕ 125 ದಿನಗಳ ಗ್ಯಾರಂಟಿ ಉದ್ಯೋಗ ದೊರೆಯಲಿದೆ. ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡಲಾಗುತ್ತಿದೆ. ಆದ್ದರಿಂದ ಉದ್ಯೋಗ ಚೀಟಿ ಹೊಂದಿರುವ ಅರ್ಹ ಕುಟುಂಬಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶ್ರುತಿ ಸಲಹೆ ನೀಡಿದರು.
ಕಾರ್ಮಿಕರ ಜತೆಗೆ ನೇರ ಸಂವಾದ ನಡೆಸುವ ಮೂಲಕ ಯೋಜನೆಯಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿಕೊಟ್ಟರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹದೇವಸ್ವಾಮಿ ಹಾಗೂ ಸಿಬ್ಬಂದಿ ಹಾಜರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net