ಬೆಂಗಳೂರು: ಬೆಂಗಳೂರಿನ ಕನಕಪುರ ರಸ್ತೆಯಲ್ಲಿ ಇರುವ ದಿ ಆರ್ಟ್ ಆಫ್ ಲಿವಿಂಗ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಭಾಗವಹಿಸುವ ಸಲುವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಶುಕ್ರವಾರ ಭಾರತೀಯ ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಉಪರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಶಾಸಕ ರಾಮಲಿಂಗರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಅಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.