ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೇ ದಿನಾಂಕವನ್ನು ಆ.20ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.. ಪ್ರಸನ್ನ ತಿಳಿಸಿದ್ದಾರೆ.
ಶುಲ್ಕ ಪಾವತಿಸಲು ಆ.21 ಕೊನೆಯ ದಿನವಾಗಿದೆ. ಸಾರ್ವಜನಿಕರ ಕೋರಿಕೆ ಮೇರೆಗೆ ಆ.7ಕ್ಕೆ ಇದ್ದ ಕೊನೆ ದಿನಾಂಕ ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.