ರೋಗದ ಭೀತಿಯಲ್ಲಿ ದಿಗುವಪಾಪಿಶೆಟ್ಟಿಪಲ್ಲಿ ಗ್ರಾಮಸ್ಥರು

Villagers of Diguvapapishettipalli live in fear of disease.
Villagers of Diguvapapishettipalli live in fear of disease.
Published on
ರಾಯಲ್ಪಾಡು: ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಪಂ ವ್ಯಾಪ್ತಿಯ ದಿಗುವಪಾಪಿಶೆಟ್ಟಿಪಲ್ಲಿಯಲ್ಲಿ ಚರಂಡಿಗಳ ಸಮರ್ಪಕ ನಿರ್ವಹಣೆ ಇಲ್ಲದೇ ಸಾರ್ವಜನಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಗ್ರಾಮದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲ. ಇರುವ ಚರಂಡಿಗಳಲ್ಲೂ ಕಸ, ಮಣ್ಣು ತುಂಬಿಕೊಂಡಿದ್ದು, ನೀರು ನಿಂತಲ್ಲೇ ನಿಂತು ದುರ್ವಾಸನೆ ಹರಡುತ್ತಿದೆ. ಮನೆಗಳಲ್ಲಿಯೂ ದುರ್ವಾಸನೆ ಹೆಚ್ಚಾಗಿದ್ದು, ಸೊಳ್ಳೆಗಳ ಕಾಟದಿಂದ ಜನರು ತತ್ತರಿಸಿದ್ದಾರೆ. ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಚರಂಡಿ ಸ್ವಚ್ಛಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು.

— ಶ್ರೀನಿವಾಸರೆಡ್ಡಿ, ಗ್ರಾಮಸ್ಥ
ಚರಂಡಿಗಳಲ್ಲಿ ಮಣ್ಣು, ಕಸ&ಕಡ್ಡಿಗಳು ತುಂಬಿಕೊಂಡು ನೀರು ಸರಾಗವಾಗಿ ಹರಿಯದೆ ರಸ್ತೆ ಮೇಲೆ ಹರಿಯುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಗ್ರಾಮದ ಹಲವು ಭಾಗಗಳಲ್ಲಿ ಚರಂಡಿಗಳು ಸಂಪೂರ್ಣ ಮುಚ್ಚಿಕೊಂಡಿರುವ ಕಾರಣ ಸೊಳ್ಳೆಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡೆಂ, ಮಲೇರಿಯಾ ಸೇರಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಮಕ್ಕಳು ಶಾಲೆಗೆ ತೆರಳಲು, ಆಟವಾಡಲು, ವೃದ್ಧರು ರಸ್ತೆಗಳಲ್ಲಿ ಸಂಚರಿಸಲು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಚರಂಡಿ ಸಮಸ್ಯೆಯಿಂದ ಗ್ರಾಮದಲ್ಲಿ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿಲ್ಲ. ದುರ್ವಾಸನೆಯಿಂದ ಮನೆಗಳಲ್ಲಿ ನೆಮ್ಮದಿಯಾಗಿ ನಿದ್ದೆ ಬರುತ್ತಿಲ್ಲ. ಮಕ್ಕಳನ್ನು ಹೊರಗೆ ಆಟವಾಡಲು ಬಿಡಲು ಭಯವಾಗುತ್ತಿದೆ. ರಸ್ತೆ ಮೇಲೆಯೇ ಚರಂಡಿ ನೀರು ಹರಿಯುತ್ತಿರುವುದರಿಂದ ಅಪಾಯದ ಪರಿಸ್ಥಿತಿ ನಿಮಾರ್ಣವಾಗಿದೆ. ಈ ಕುರಿತು ಗ್ರಾಪಂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ಮೇಲಾಧಿಕಾರಿಗಳು ತಕ್ಷಣ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕು.

— ಸಿದ್ದಾರೆಡ್ಡಿ, ಗ್ರಾಮಸ್ಥ
ಗ್ರಾಮದ ಕುಡಿಯುವ ನೀರಿನ ಟ್ಯಾಂಕ್​ ಸಮೀಪ ಪಾಚಿ ಕಟ್ಟಿಕೊಂಡಿದ್ದು, ಹಲವು ದಿನಗಳಿಂದ ಸ್ವಚ್ಛಗೊಳಿಸದೇ ರ್ನಿಲಕ್ಷ$್ಯವಹಿಸಲಾಗಿದೆ. ಜತೆಗೆ ಈ ನೀರನ್ನೇ ಮನೆ ಬಳಕೆಗೆ ಬಳಸಬೇಕಾದ ಅನಿವಾರ್ಯ ಪರಿಸ್ಥಿತಿ ನಿಮಾರ್ಣವಾಗಿದೆ.
ಗ್ರಾಮದ ಸ್ವಚ್ಛತೆ ಮತ್ತು ಚರಂಡಿ ನಿರ್ವಹಣೆಯಲ್ಲಿ ಅಧಿಕಾರಿಗಳ ರ್ನಿಲಕ್ಷ$್ಯದಿಂದ ಸಾರ್ವಜನಿಕ ಆರೋಗ್ಯ ಅಪಾಯಕ್ಕೆ ಸಿಲುಕಿದೆ. ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ, ನೀರು ಸರಾಗವಾಗಿ ಹರಿಯುವ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದರೆ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net