ಶಿಷ್ಟಾಚಾರ ಉಲ್ಲಂಘನೆ: ಕೆಎಸ್‌ಒಯು ಕುಲಪತಿಗೆ ನೋಟಿಸ್

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ
Published on

ಪ್ರಮುಖ ಮುಖ್ಯಾಂಶಗಳು

  • ಕೂಡಲೇ ಸರ್ಕಾರಕ್ಕೆ ಸಮಜಾಯಿಷಿ ನೀಡದಿದ್ದಲ್ಲಿ ತಮ್ಮ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ನೋಟಿಸ್‌ನಲ್ಲಿ ಎಚ್ಚರಿಕೆ
  • ಕೆಎಸ್‌ಒಯು ಮೇ 25ರಿಂದ 27ರವರೆಗೆ ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ
  • ‘ಪ್ರಜ್ಞಾ ಪ್ರವಾಹ ಮತ್ತು ಡಾ. ಶ್ಯಾಮಪ್ರಸಾದ್ ಮುಖರ್ಜಿ ಸಂಶೋಧನಾ ಪ್ರತಿಷ್ಠಾನ’ದ ಸಹಯೋಗದಲ್ಲಿ ‘ಏಕಾತ್ಮ ಮಾನವ್ ದರ್ಶನ್’ ಎಂಬ ಭಾರತ್ ವರ್ಲ್ಡ್ ವ್ಯೆ (ಭಾರತದ ವಿಶ್ವ ದೃಷ್ಟಿಕೋನ) ಕುರಿತು ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ
ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕೆಎಸ್‌ಒಯು) ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನ ಆಯೋಜಿಸಿರುವ ವಿಚಾರವಾಗಿ ಶಿಷ್ಟಾಚಾರ ಪಾಲನೆ ಮಾಡದಿರುವುದಕ್ಕೆ ರಾಜ್ಯ ಸರ್ಕಾರವು ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ.
ಕೂಡಲೇ ಸರ್ಕಾರಕ್ಕೆ ಸಮಜಾಯಿಷಿ ನೀಡದಿದ್ದಲ್ಲಿ ತಮ್ಮ ವಿರುದ್ಧ ಶಿಸ್ತುಕ್ರಮ ಜರುಗಿಸುವುದಾಗಿ ಶಿಾರಸು ಮಾಡಲಾಗುವುದು ಎಂದು ಕೆಎಸ್‌ಒಯು ಕುಲಪತಿಗಳಿಗೆ ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿ ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು) ಉಪ ಕಾರ್ಯದರ್ಶಿ ಎನ್. ಕುಮಾರ್ ಆದೇಶ ಹೊರಡಿಸಿದ್ದಾರೆ.
ಕೆಎಸ್‌ಒಯು ಮೇ 25ರಿಂದ 27ರವರೆಗೆ ‘ಪ್ರಜ್ಞಾ ಪ್ರವಾಹ ಮತ್ತು ಡಾ. ಶ್ಯಾಮಪ್ರಸಾದ್ ಮುಖರ್ಜಿ ಸಂಶೋಧನಾ ಪ್ರತಿಷ್ಠಾನ’ದ ಸಹಯೋಗದಲ್ಲಿ ‘ಏಕಾತ್ಮ ಮಾನವ್ ದರ್ಶನ್’ ಎಂಬ ಭಾರತ್ ವರ್ಲ್ಡ್ ವ್ಯೆ (ಭಾರತದ ವಿಶ್ವ ದೃಷ್ಟಿಕೋನ) ಕುರಿತು ಅಂತಾರಾಷ್ಟ್ರೀಯ ಶೈಕ್ಷಣಿಕ ಸಮ್ಮೇಳನವನ್ನು ಆಯೋಜಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ವಿಶ್ವವಿದ್ಯಾಲಯಕ್ಕೆ ಉನ್ನತ ಶಿಕ್ಷಣ ಸಚಿವರು ಸಹ ಕುಲಾಧಿಪತಿಗಳಾಗಿರುತ್ತಾರೆ. ರಾಜ್ಯಪಾಲರ ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಇಲಾಖಾ ಸಚಿವರನ್ನು ಸಬೆಗೆ ಆಹ್ವಾನಿಸುವುದು ಶಿಷ್ಟಾಚಾರವಾಗಿರುತ್ತದೆ. ವಿಶ್ವವಿದ್ಯಾಲಯದ ಕುಲಪತಿಗಳಾಗಿ ಈ ಕಾರ್ಯಕ್ರಮವನ್ನು ಆಯೋಜಿಸುವ ಪೂರ್ವದಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸದಿರುವುದನ್ನು ಸರ್ಕಾರವು ಗಂಭೀರವಾಗಿ ಪರಿಗನೀಸಿದೆ.
ವಿಧಾನ ಪರಿಷತ್ತಿನಲ್ಲಿ ಎಂಎಲ್‌ಸಿ ರಮೇಶ್ ಬಾಬು ಅವರು ಕೂಡ ಸೋಮವಾರ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಏಕೆ ಶಿಸ್ತುಕ್ರಮ ಜರುಗಿಸಬಾರದು ಎಂಬುದಕ್ಕೆ ಲಿಖಿತ ಸಮಜಾಯಿಷಿಯನ್ನು ನೋಟಿಸ್ ತಲುಪಿದ 24 ಗಂಟೆಯೊಳಗಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿ ನೋಟಿಸ್ ನೀಡಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net