ಬೆಂಗಳೂರು: "ನನಗಿಂತ ವಯಸ್ಸಿನಲ್ಲಿ ಹಿರಿಯಳಾಗಿರುವ ಯುವತಿಯು ಪ್ರೀತಿಸುವ ನಾಟಕವಾಡಿ, ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾಳೆ. 19 ವರ್ಷದ ಯುವತಿಯು ತಾನು ಗರ್ಭಿಣಿಯಾದ ನಂತರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಸುಳ್ಳು ದೂರು ದಾಖಲಿಸಿದ್ದಾಳೆ. ಆದ್ದರಿಂದ ನನ್ನ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಗೊಳಿಸಬೇಕು' ಎಂದು ಕೋರಿ 17 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕನೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ.