ಕಿಮ್ಸ್ ಆಸ್ಪತ್ರೆಗೆ ಭೇಟಿ : ಸಚಿವ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ನಿರಾಣಿ ; ಸುಧಾಕರ್ ಕುಟುಂಬಕ್ಕೆ ಧೈರ್ಯ ತುಂಬಿದ ಮುರುಗೇಶ

ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರಾದ ಶ್ರೀ ಜಿ. ಎಂ. ಸಿದ್ದೇಶ್ವರ ಸೇರಿದಂತೆ ಇತರ ಪ್ರಮುಖ ಗಣ್ಯರು ಉಪಸ್ಥಿತರಿದ್ದು ಸಚಿವರ ಶೀಘ್ರ ಗುಣಮುಖಕ್ಕಾಗಿ ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರಾದ ಶ್ರೀ ಜಿ. ಎಂ. ಸಿದ್ದೇಶ್ವರ ಸೇರಿದಂತೆ ಇತರ ಪ್ರಮುಖ ಗಣ್ಯರು ಉಪಸ್ಥಿತರಿದ್ದು ಸಚಿವರ ಶೀಘ್ರ ಗುಣಮುಖಕ್ಕಾಗಿ ಪ್ರಾರ್ಥಿಸಿದರು.
Published on
ಕಲಬುರಗಿ : ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖಿಕ ಇಲಾಖೆಯ ಸಚಿವರಾದ ಶ್ರೀ ಡಿ. ಸುಧಾಕರ್ ಅವರನ್ನು ಮಾಜಿ ಸಚಿವರು ಹಾಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾದ ಡಾ. ಮುರುಗೇಶ್ ಆರ್ ನಿರಾಣಿ ಅವರು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಡಾ. ನಿರಾಣಿ ಅವರು, ಸಚಿವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದೊಂದಿಗೆ ಸುಧಾಕರ್ ಅವರ ಪ್ರಸ್ತುತ ಆರೋಗ್ಯ ಸ್ಥಿತಿಗತಿಯ ಬಗ್ಗೆ ಸಮಾಲೋಚನೆ ನಡೆಸಿದರು. ನಂತರ ಸಚಿವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಅವರಿಗೆ ಧೈರ್ಯ ತುಂಬಿದರಲ್ಲದೆ, ಸಚಿವರು ಶೀಘ್ರವಾಗಿ ಚೇತರಿಸಿಕೊಂಡು ಜನಸೇವೆಗೆ ಮರಳಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರಾದ ಶ್ರೀ ಜಿ. ಎಂ. ಸಿದ್ದೇಶ್ವರ ಸೇರಿದಂತೆ ಇತರ ಪ್ರಮುಖ ಗಣ್ಯರು ಉಪಸ್ಥಿತರಿದ್ದು ಸಚಿವರ ಶೀಘ್ರ ಗುಣಮುಖಕ್ಕಾಗಿ ಪ್ರಾರ್ಥಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net