285 ಮತಗಟ್ಟೆಗಳಲ್ಲೂ ಮತಪಟ್ಟಿ ಪರಿಷ್ಕರಣೆ ಶುರು

ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಸಕಲೇಶಪುರದಲ್ಲಿ ಅಧಿಕಾರಿಗಳು  ಮುರಳಿಮೋಹನ್ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.
ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಸಕಲೇಶಪುರದಲ್ಲಿ ಅಧಿಕಾರಿಗಳು ಮುರಳಿಮೋಹನ್ ಮನೆಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು.
Published on

ಪ್ರಮುಖ ಮುಖ್ಯಾಂಶಗಳು

  • ಉಪವಿಭಾಗಾಧಿಕಾರಿ ಹುಲ್ಲಮನಿ ತಿಮ್ಮಣ್ಣ
  • ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮುರಳಿಮೋಹನ್ ಸ್ವಗೃಹ
ಸಕಲೇಶಪುರ: ಸಕಲೇಶಪುರ-ಆಲೂರು ವಿಧಾನಸಭಾ ಕ್ಷೇತ್ರದಲ್ಲಿ 269 ಪ್ರಮುಖ ಮತದಾರರನ್ನು ಗುರುತಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಹುಲ್ಲಮನಿ ತಿಮ್ಮಣ್ಣ ಹೇಳಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮುರಳಿಮೋಹನ್ ಸ್ವಗೃಹದಲ್ಲಿ ಬುಧವಾರ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನಸಭಾ ಕ್ಷೇತ್ರದಲ್ಲಿ ವಿಶೇಷ ಪ್ರಮುಖ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದ್ದು, ಮತಪಟ್ಟಿ ಪರಿಷ್ಕರಣೆಯಿಂದ ಹೊರಗುಳಿಯದಂತೆ ನಿಗಾವಹಿಸುವ ಮೂಲಕ ಮೊದಲ ಹಂತದಲ್ಲಿ ಮಾಹಿತಿ ಕಲೆಹಾಕಲಾಗುತ್ತಿದೆ ಎಂದರು.
ವಿಧಾನಸಭಾ ಕ್ಷೇತ್ರದ 285 ಮತಗಟ್ಟೆಗಳಲ್ಲೂ ಈಗಾಗಲೇ ಮತಪಟ್ಟಿ ಪರಿಷ್ಕರಣೆಯಲ್ಲಿ ಸಿಬ್ಬಂದಿ ತೊಡಗಿಸಿಕೊಂಡಿದ್ದು, ಎಲ್ಲಿಯೂ ಲೋಪವಾಗದಂತೆ ನಿಗಾವಹಿಸಲಾಗಿದೆ. ಬಿಎಲ್‌ಎ2 ಸಿಬ್ಬಂದಿಯೊಂದಿಗೆ ರಾಜಕೀಯ ಪಕ್ಷದ ಕಾರ್ಯಕರ್ತರು ತೆರಳಲು ಅವಕಾಶವಿದೆ. ಅರ್ಹ ಮತದಾರರು ಯಾವುದೆ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನಿಯೋಗ ನೋಡಿಕೊಳ್ಳಲಾಗುತ್ತಿದೆ. ಮತಪಟ್ಟಿಗೆ ಸೇರ್ಪಡೆಗೊಳ್ಳಲು ಚುನಾವಣೆ ಆಯೋಗ ಹೊರಡಿಸಿರುವ 12 ಪ್ರಮುಖ ಗುರುತಿನ ಚೀಟಿ ಹಾಜರು ಪಡಿಸುವ ಮೂಲಕ ಮತಪಟ್ಟಿಗೆ ಸೇರ್ಪಡೆಗೊಳ್ಳಲು ಅವಕಾಶವಿದೆ ಎಂದರು.
ಮುರಳಿಮೋಹನ್ ಮಾತನಾಡಿ, 2002ರ ನಂತರ ನಡೆಯುತ್ತಿರುವ ಪರಿಷ್ಕರಣೆ ಕಾರ್ಯದಲ್ಲಿ ನೈಜ ಮತದಾರರು ಹೊರಗುಳಿಯದಂತೆ ನೋಡಿಕೊಳ್ಳಬೇಕಿದೆ. ಪರಿಷ್ಕರಣೆ ಕಾರ್ಯದ ಬಗ್ಗೆ ಮತದಾರರು ಗೊಂದಲಕ್ಕೀಡಾಗುವ ಅಥವಾ ಹೆದರಿಕೊಳ್ಳುವ ಅಗತ್ಯವಿಲ್ಲ. ಯಾವುದೇ ಕಾರಣಕ್ಕೂ ನೈಜ ಮತದಾರರನ್ನು ಮತಪಟ್ಟಿಯಿಂದ ಹೊರಗಿಡಲ್ಲ. ಅಂತಹ ವಿದ್ಯಮಾನ ಕಂಡು ಬಂದರೆ ಸಂಬಂಧಿತ ಸಿಬ್ಬಂದಿ ಅಮಾನತು ಆಗುವುದರಲ್ಲಿ ಅನುಮಾನವಿಲ್ಲ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net