ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಪಾರದರ್ಶಕವಾಗಿರಲಿ

ಬಾಗಲಕೋಟೆ ಜಿಪಂ ಸಭಾಭವನದಲ್ಲಿ ಮಂಗಳವಾರ ನಡೆದ ಎಸ್‌ಐಆರ್ ಕುರಿತ ತರಬೇತಿಯಲ್ಲಿ ಜಿಲ್ಲಾಽಕಾರಿ ಸಂಗಪ್ಪ ಮಾತನಾಡಿದರು. ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಬಾಗಲಕೋಟೆ ಉಪವಿಭಾಗಾಽಕಾರಿ ಸಂತೋಷ ಜಗಲಾಸರ್, ಜಮಖಂಡಿ ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ್ ಇದ್ದರು.
ಬಾಗಲಕೋಟೆ ಜಿಪಂ ಸಭಾಭವನದಲ್ಲಿ ಮಂಗಳವಾರ ನಡೆದ ಎಸ್‌ಐಆರ್ ಕುರಿತ ತರಬೇತಿಯಲ್ಲಿ ಜಿಲ್ಲಾಽಕಾರಿ ಸಂಗಪ್ಪ ಮಾತನಾಡಿದರು. ಅಪರ ಜಿಲ್ಲಾಽಕಾರಿ ಅಶೋಕ ತೇಲಿ, ಬಾಗಲಕೋಟೆ ಉಪವಿಭಾಗಾಽಕಾರಿ ಸಂತೋಷ ಜಗಲಾಸರ್, ಜಮಖಂಡಿ ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ್ ಇದ್ದರು.
Published on
ಬಾಗಲಕೋಟೆ: ಜಿಲ್ಲಾದ್ಯಂತ ಜೂನ್ ೩೦ ರಿಂದ ಆರಂಭಗೊಳ್ಳಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯವನ್ನು ಪರಿಣಾಮಕಾರಿಯಾಗಿ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾಽಕಾರಿ ಸಂಗಪ್ಪ ಅವರು ಅಽಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಮಂಗಳವಾರ ಬಿಎಲ್‌ಓ, ಸೂಪರವೈಜರ್ ಹಾಗೂ ಎಎಲ್‌ಎಂಟಿಗಳಿಗೆ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮತದಾರ ಪಟ್ಟಿಯು ಚುನಾವಣೆ ಪ್ರಕ್ರಿಯೆಯ ಮೂಲಾಧಾರ ಆಗಿರುವದರಿಂದ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೇ ಕಾರ್ಯನಿರ್ವಹಿಸಬೇಕು. ನಿಗದಿತ ವೇಳಾಪಟ್ಟಿಯೊಳಗಾಗಿ ಪರಿಷ್ಕರಣೆ ಕಾರ್ಯ ಪೂರ್ಣಗೊಳಿಸಬೇಕು ಎಂದರು.
ಅಪರ ಜಿಲ್ಲಾಽಕಾರಿ ಅಶೋಕ ತೇಲಿ ಮಾತನಾಡಿ, ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ಇರಬೇಕೆಂಬುವುದು ಎಸ್‌ಐಆರ್‌ನ ಮೂಲ ಉದ್ದೇಶವಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಸಂಪೂರ್ಣವಾಗಿ ತರಬೇತಿಯನ್ನು ಪಡೆದುಕೊಂಡು ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಲು ತಿಳಿಸಿದರು.
ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾದ ಸಂಗಮೇಶ ಸನತಂಗಿ ತರಬೇತಿ ನೀಡಿದರು. ತರಬೇತಿಯಲ್ಲಿ ಮತದಾರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಮೃತ ಹಾಗೂ ಸ್ಥಳಾಂತರಗೊAಡ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮತಗಟ್ಟೆ ಮಟ್ಟದ ಅಽಕಾರಿಗಳು ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುವಾಗ ಅನುಸರಿಸಬೇಕಾದ ನಿಯಮಗಳು ಹಾಗೂ ಮಾರ್ಗಸೂಚಿಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.
ಉಪವಿಭಾಗಾಽಕಾರಿಗಳಾದ ಸಂತೋಷ ಜಗಲಾಸರ, ಶ್ವೇತಾ ಬೀಡಿಕರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕುಗಳ ತಹಶೀಲ್ದಾರ ಹಾಗೂ ಬಿಎಲ್‌ಓ, ಸೂಪರವೈಜರ್ ಹಾಗೂ ಎಎಲ್‌ಎಂಟಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net