ಮತದಾರರ ದಿನ: ಕಾಲೇಜುಗಳಲ್ಲಿ ಸ್ಪರ್ಧೆ ಆಯೋಜನೆಗೆ ಸೂಚನೆ

ಮತದಾರರ ದಿನ
ಮತದಾರರ ದಿನ
Published on

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯು ಸೂಚನೆ
  • ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ನೂತನ ಮತ್ತು ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯಯೆಗಳಿಗೆ ಸಂಬಂಧಿಸಿದಂತೆ ಜಾಗೃತಿ
  • ಮತದಾರರ ಸಾಕ್ಷರತಾ ಸಂಘ’ಗಳನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಕೇಂದ್ರಗಳಲ್ಲಿ ಚುನಾವಣಾ ಪಾಠಶಾಲೆಗಳನ್ನು ಸ್ಥಾಪಿಸಲಾಗಿದೆ
ಬೆಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳನ್ನು ಆಯೋಜಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಕೇಂದ್ರ ಚುನಾವಣಾ ಆಯೋಗದ ಸೂಚನೆಯಂತೆ ನೂತನ ಮತ್ತು ಭವಿಷ್ಯದ ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯಯೆಗಳಿಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಸಲುವಾಗಿ ಎಲ್ಲ ಶೈಕ್ಷಣಿಕ ಸಂಸ್ತೆಗಳಲ್ಲಿ ‘ಮತದಾರರ ಸಾಕ್ಷರತಾ ಸಂಘ’ಗಳನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಕೇಂದ್ರಗಳಲ್ಲಿ ಚುನಾವಣಾ ಪಾಠಶಾಲೆಗಳನ್ನು ಸ್ಥಾಪಿಸಲಾಗಿದೆ.
ಯುವ ಮತದಾರರಿಗೆ ಭಾವಚಿತ್ರವಿರುವ ಗುರುತಿನ ಚೀಟಿ ನೀಡಿ ಮತದಾರರ ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕಾಲೇಜುಗಳಲ್ಲಿ ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸುವಂತೆ ಮತ್ತು ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸೂಚಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net