ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಜೂನ್ 30ಕ್ಕೆ ಅವಧಿ ಮುಕ್ತಾಯವಾಗುವ ಏಳು ಸದಸ್ಯರ ಸ್ಥಾನಗಳಿಗೆ ಜೂನ್ 18ಕ್ಕೆ ಮತದಾನ ನಡೆಸಲು ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ಜೆಡಿಎಸ್‌ನ 1 ಸ್ಥಾನ, ಬಿಜೆಪಿಯ ಮೂರು ಮತ್ತು ಕಾಂಗ್ರೆಸ್‌ನ ಮೂರು ಸ್ಥಾನಗಳು ಜೂ.30ಕ್ಕೆ ಖಾಲಿಯಾಗಲಿದೆ. ಈ ಸ್ಥಾನಗಳಿಗೆ ಚುನಾವಣೆ ನಡೆಸಲು ಜೂನ್ 1ರಂದು ಅಧಿಸೂಚನೆ ಹೊರಡಿಸಲಿದೆ. ಜೂನ್ 8ಕ್ಕೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು, 9ಕ್ಕೆ ಪರಿಶೀಲನೆ ನಡೆಯಲಿದೆ.
ನಾಮಪತ್ರ ಹಿಂಪಡೆಯಲು 11 ಕೊನೇ ದಿನಾಂಕವಾಗಿದ್ದು, 18ಕ್ಕೆ ಮತದಾನ ನಡೆಯಲಿದೆ. ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೂ ಮತದಾನಕ್ಕೆ ಅವಕಾಶ ಇದೆ. ಅದೇ ದಿನ 5 ಗಂಟೆಗೆ ಮತ ಎಣಿಕೆ ಶುರುವಾಗಲಿದೆ. 20ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.