ಸಾಲ ಮನ್ನಾ ಮಾಡಿ, ಹೊಸ ಸಾಲ ವಿತರಿಸಿ new loans

ಸಾಲ ಮನ್ನಾ ಮಾಡಿ, ಹೊಸ ಸಾಲ ವಿತರಿಸಿ new loans
ಸಾಲ ಮನ್ನಾ ಮಾಡಿ, ಹೊಸ ಸಾಲ ವಿತರಿಸಿ new loans
Published on
ಬಂಗಾರಪೇಟೆ: ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರ ರಾಷ್ಟ್ರೀಕೃತ ಮತ್ತು ಸಹಕಾರ ಬ್ಯಾಂಕ್​ಗಳ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ಮತ್ತೆ 10 ಲಕ್ಷ ರೂ.ವರೆಗೆ ಹೊಸ ಕೃಷಿ ಸಾಲ ವಿತರಿಸಬೇಕು ಎಂದು ರೈತ ಸಂಘ ಪ್ರತಿಭಟನೆ ನಡೆಸಿ ತಹಸೀಲ್ದಾರ್​ ಸುಜಾತಾ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿತು. new loans
ಜಿಲ್ಲೆಗೆ 10 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಕೃಷಿ ಆಧಾರಿತ ಮಾವು ಸಂಸ್ಕರಣಾ ಘಟಕಗಳು ಹಾಗೂ ಶೀತಲೀಕರಣ ಘಟಕಸ್ಥಾಪಿಸಬೇಕೆಂದು ಒತ್ತಾಯಿಸಿತು.
ರಾಜ್ಯ ರೈತಸಂಘ ಉಪಾಧ್ಯಕ್ಷ ನಾರಾಯಣಗೌಡ ಮಾತನಾಡಿ, ಬೆಳೆಗಳಿಗೆ ರೋಗಬಾಧೆ, ನಕಲಿ ಬೀಜ, ಅತಿವೃಷ್ಟಿ, ಅನಾವೃಷ್ಟಿ, ಪ್ರಕೃತಿ ವಿಕೋಪಗಳ ನಡುವೆ ರೈತರು ಬೆಳೆ ಬೆಳೆದರೂ ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗಿ ಹಾಕಿದ ಬಂಡವಾಳವೂ ವಾಪಸ್​ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಿಸಿಸಿ ಬ್ಯಾಂಕ್​ನಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಪ್ರಾಮಾಣಿಕವಾಗಿ ಸಾಲ ತೀರಿಸಿದ ರೈತರಿಗೆ ಮತ್ತೆ ಸಾಲ ನೀಡದೆ ರ್ನಿಲಕ್ಷ$್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಕೆ.ಸಿ.ವ್ಯಾಲಿ ನೀರಿನಿಂದ ಈ ಬಾರಿ ಆಲೂಗಡ್ಡೆ ಉತ್ತಮ ಇಳುವರಿ ಬಂದಿದ್ದರೂ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಶೀತಲೀಕರಣ ಘಟಕಗಳ ಕೊರತೆಯಿಂದ ಖಾಸಗಿ ಗೋದಾಮುಗಳಲ್ಲಿ ವ್ಯಾಪಾರಸ್ಥರಿಗೆ ಮಾತ್ರ ಅವಕಾಶ ಸಿಗುತ್ತಿದ್ದು, ರೈತರು ಕಡಿಮೆ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ನಿಮಾರ್ಣವಾಗಿದೆ ಎಂದು ಹೇಳಿದರು.
ಟೊಮ್ಯಾಟೊ, ಹೂ, ಕ್ಯಾಪ್ಸಿಕಂ ಸೇರಿದಂತೆ ವಾಣಿಜ್ಯ ಬೆಳೆಗಳಿಗೂ ಮಾರುಕಟ್ಟೆಯಲ್ಲಿ ಬೆಲೆ ಸಿಗದ ಹಿನ್ನೆಲೆ ರೈತರ ರಕ್ಷಣೆಗೆ ಸರ್ಕಾರ ತಕ್ಷಣ ಸ್ಪಂದಿಸಿ ಸಾಲಮನ್ನಾ ಹಾಗೂ ಹೊಸ ಸಾಲ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ತಹಸೀಲ್ದಾರ್​ ಸುಜಾತಾ ಮಾತನಾಡಿ, ರೈತರ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸುವ ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net