ಕನ್ನಾರಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ಭೂಮಿ ಪೂಜೆ ನೆರವೇರಿಸಿದರು. ಪ್ರಮುಖರಾದ ಮಲ್ಲನಗೌಡ ಕನ್ನಾರಿ, ಆನಂದ ಬೊಮ್ಮನಾಳ ಇತರರಿದ್ದರು.
ಸಿಂಧನೂರು: ತಾಲೂಕಿನ ಕನ್ನಾರಿ ಗ್ರಾಮದಲ್ಲಿ ನಿರ್ಮಿತ ಕೇಂದ್ರದ 40ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುಗೌಡ ಬಾದರ್ಲಿ ಭಾನುವಾರ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಂತರ ಮಾತನಾಡಿ, ಕಾಮಗಾರಿ ಗುಣಮಟ್ಟದಿಂದ ಹಾಗೂ ಶೀಘ್ರದಲ್ಲಿ ಪೂರ್ಣಗೊಳ್ಳಬೇಕು.
ಗ್ರಾಮದ ಅಭಿವೃದ್ಧಿಗೆ ರಸ್ತೆ ಕಾಮಗಾರಿಗಳು ಅಗತ್ಯವಾಗಿದ್ದು, ಯಾವುದೇ ಕಾರಣಕ್ಕೂ ಕಳಪೆ ಆಗದಂತೆ ನೋಡಿಕೊಳ್ಳಬೇಕು.
ಗ್ರಾಮಸ್ಥರು ಕಾಮಗಾರಿ ಬಗ್ಗೆ ನಿಗಾವಹಿಸಿ ಗುಣಮಟ್ಟದ ಕೆಲಸ ಮಾಡಿಸಿಕೊಳ್ಳಬೇಕು ಎಂದರು.