

ಜಿಲ್ಲೆಯಲ್ಲಿ ನೀರಿನ ಸಮಸ್ಯೆ
ಜಿಲ್ಲೆಯ 19 ಗ್ರಾಪಂಗಳ ವ್ಯಾಪ್ತಿಯ 23 ಗ್ರಾಮಗಳಿಗೆ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಇದ್ದು ಖಾಸಗಿ ಕೊಳವೆ ಬಾವಿ ಮೂಲಕ ನೀರು ಪೂರೈಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ 66 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಗತ್ಯವಿರುವ ಕಡೆ ಕೊಳವೆ ಬಾವಿ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ನಗರಾಡಳಿತ ಪ್ರದೇಶ ವ್ಯಾಪ್ತಿಯಲ್ಲಿನ 14 ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. 9 ಖಾಸಗಿ ಟ್ಯಾಂಕರ್ ಹಾಗೂ 10 ಖಾಸಗಿ ಕೊಳವೆ ಬಾವಿ ಮೂಲಕ ಪ್ರಸ್ತುತ ನೀರು ಪೂರೈಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ 21 ವಾರ್ಡ್ಗಳಲ್ಲಿ ಸಮಸ್ಯೆ ಎದುರಾಗುವ ನಿರೀೆ ಹೊಂದಿದ್ದು ಇಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ತೆರೆದ ಕೊಳವೆಬಾವಿ ಎಚ್ಚರಿಕೆ
ತೆರೆದ ಕೊಳವೆ ಬಾವಿಗಳಿಗೆ ಬಿದ್ದು ಪ್ರಾಣ ಹಾನಿ ಸಂಭವಿಸುವ ಪ್ರಕರಣಗಳಿಗೆ ಅವಕಾಶ ನೀಡದಿರಲು, ಸುರಕ್ಷತಾ ಕ್ರಮಗಳನ್ನು ಖಾತ್ರಿಪಡಿಸಿಕೊಳ್ಳಲು ತಹಸೀಲ್ದಾರ್, ತಾಪಂ ಇಒ, ನಗರಾಡಳಿತ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯಾ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣೆಗೆ ಸಲಹೆ ಸೂಚನೆಗಳನ್ನು ನೀಡಲಾಯಿತು. ನೀರು ಲಭಿಸದ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚಬೇಕು. ಕೊಳವೆ ಬಾವಿಯಲ್ಲಿ ನೀರು ದೊರಕಿದರೂ ವಿದ್ಯುತ್ ಸಂಪರ್ಕ ಇಲ್ಲವೇ ಇತರ ಸೌಕರ್ಯ ಕಲ್ಪಿಸುವಲ್ಲಿ ವಿಳಂಬ ಧೋರಣೆ ಸರಿಯಲ್ಲ ಎಂದು ಡಿಸಿ ತಿಳಿಸಿದರು.
ನಿರ್ದಾಣ್ಯ ಕ್ರಮ
ಯಾವುದೇ ಕಾರಣಕ್ಕೂ ಕೊಳವೆ ಬಾವಿಗಳಲ್ಲಿ ಬಿದ್ದು ಪ್ರಾಣ ಹಾನಿ ಆಗುವ ಪ್ರಸಂಗಗಳು ಜಿಲ್ಲೆಯಲ್ಲಿ ನಡೆಯಬಾರದು. ಒಂದು ವೇಳೆ ಸಂಭವಿಸಿದರೆ ಸಂಬಂಧಪಟ್ಟ ಅಭಿಯಂತರರು ಹಾಗೂ ಸ್ಥಳಿಯ ಅಧಿಕಾರಿಗಳ ವಿರುದ್ಧ ನಿರ್ದಾಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.