ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿಮೆಂಟ್ ಮಂಜು, ಒಂದು ತಿಂಗಳಿನಿಂದ ಜಲಾಶಯದಿಂದ ನೀರು ಹರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲಾಗಿತ್ತು. ಅಲ್ಲದೆ ಇತ್ತೀಚೆಗೆ ಕೃಷಿ ಸಚಿವ ಚಲುವರಾಯಸ್ವಾಮಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಂ. ಶಿವಲಿಂಗೇಗೌಡರು ಎತ್ತಿನಹೊಳೆ ಯೋಜನೆ ಪರಿಶೀಲನೆ ಮಾಡಲು ಸಕಲೇಶಪುರಕ್ಕೆ ಬಂದ ಸಂದರ್ಭದಲ್ಲಿಯೂ ವಾಟೆಹೊಳೆ ಜಲಾಶಯದಿಂದ ನೀರು ಬಿಡಿಸಲು ಆದೇಶಿಸುವಂತೆ ಮನವಿ ಮಾಡಿದ್ದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಾಲೆಗೆ ನೀರು ಹರಿಸಲು ಆದೇಶಿಸಿದೆ ಎಂದರು.