ಬೇಸಿಗೆ ಕಾಲದಲ್ಲಿ ೇತ್ರದ ಹಲವು ಗ್ರಾಮಗಳು ಕುಡಿಯುವ ನೀರಿನ ಅಭಾವ ಕಂಡಿದೆ. ಅಧಿಕಾರಿಗಳು ನೀರಿನ ಸಮಸ್ಯೆ ಬಾರದಂತೆ ಕ್ರಮ ತೆಗೆದುಕೊಳ್ಳುತ್ತಿದ್ದರೂ ಹಲವು ಕಡೆ ನೀರಿನ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ. ಇಂತಹ ಸಂದರ್ಭದಲ್ಲಿ ತಮ್ಮ ಸ್ವಗ್ರಾಮದಲ್ಲಿ ನಿತ್ಯ ಎರಡು ಟ್ಯಾಂಕರ್ ಮೂಲಕ ಜನರಿಗೆ ನಿರಿನ ವ್ಯವಸ್ಥೆಯನ್ನು ಕಾಂಗ್ರೆಸ್ ಕೆಪಿಸಿಸಿ ಸದಸ್ಯ ಶರಣಪ್ಪ ಮಾನೇಗರ ಮಾಡಿದ್ದಾರೆ.