ಎರಡೆರಡು ರಾಜ್ಯದ ಆಧಾರ್ ಕಾರ್ಡ್ ಗಳು, ಮತದಾರರ ಚೀಟಿಗಳು ಸಂತ್ರಸ್ತರ ಬಳಿ ಇರುವ ಬಗ್ಗೆ ಕೇಳಿದಾಗ, "ಇದರ ಬಗ್ಗೆ ನನಗೆ ಗೊತ್ತಿಲ್ಲ. ಅಧಿಕಾರಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ" ಎಂದು ಹೇಳಿದರು. ಅಕ್ರಮ ನಿವಾಸಿಗಳಿಗೆ ಎಲ್ಲಿಯೂ ಮನೆ ನೀಡಲಾಗುವುದಿಲ್ಲ ಎನ್ನಲಾಗುತ್ತಿತ್ತು, ಈಗ ಸಕ್ರಮ ಮಾಡಲಾಗುತ್ತಿದೆಯಲ್ಲ ಎಂದು ಕೇಳಿದಾಗ, "ಅರ್ಹರಿಗೆ ಮಾತ್ರ ಮನೆ ನೀಡಲಾಗುವುದು. ಸ್ಥಳೀಯ ಮತದಾರರ ಪಟ್ಟಿಯಲ್ಲಿ ಹೆಸರು ಹಾಗೂ ನಿಜವಾದ ಸ್ಥಳೀಯ ವಿಳಾದ ಇದ್ದರೆ ಮಾತ್ರ ಮನೆ ನೀಡಲಾಗುವುದು. ಯಾವುದೇ ಸಕ್ರಮ ಮಾಡುತ್ತಿಲ್ಲ. ಅರ್ಹರನ್ನು ಗುರುತಿಸಲಾಗುವುದು" ಎಂದರು.