ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 2023ರಲ್ಲಿಯೇ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಅಂಗೀಕಾರವಾಗಿದೆ. ಸಾಂವಿಧಾನಿಕ ತಿದ್ದುಪಡಿ ತಂದಿದ್ದರಿಂದ ಅದು ವಿಫಲವಾಯಿತು. ಕ್ಷೇತ್ರ ಮಾರುವಿಂಗಡನೆ ಮಾಡದೆಯೇ ಮಹಿಳಾ ಮೀಸಲಾತಿ ಒಂದೇ ಮಂಡನೆಯಾಗಿದ್ದರೆ ಅಂಗೀಕಾರವಾಗುತ್ತಿತು. ರಾಜಕೀಯಕ್ಕಾಗಿ ಕ್ಷೇತ್ರ ಮರುವಿಂಗಡನೆ ಮತ್ತು ಮಹಿಳಾ ಮೀಸಲಾತಿಯನ್ನು ಒಟ್ಟಿಗೆ ತಂದಿದ್ದರಿಂದ ಮಹಿಳಾ ಮೀಸಲಾತಿ ಮಸೂದೆ ವಿಫಲವಾಗಿದೆ ಎಂದರು. ಕೇಂದ್ರ ಸರ್ಕಾರ ಇದರಲ್ಲಿ ರಾಜಕೀಯ ಮಾಡಿದ್ದಾರೆ ಎಂದರು.