ರೈತರ ಅನುಕೂಲಕ್ಕಾಗಿ ಹಾಲಿನ ದರ ಏರಿಕೆ ಮಾಡ್ತೇವೆ: ಸಚಿವ ಸಿ. ಪುಟ್ಟರಂಗಶೆಟ್ಟಿ | C Puttarangashetty

ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಇಂದು(ಅ. 06) ನಡೆದ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ರೈತರ ಅನುಕೂಲಕ್ಕಾಗಿ ಹಾಲಿನ ದರವನ್ನು ಏರಿಕೆ ಮಾಡುತ್ತೇವೆ ಎಂದು ಪಶು ಸಂಗೋಪನಾ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
ಪಶು ಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ
ಪಶು ಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ
Published on: 

ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಇಂದು(ಅ. 06) ನಡೆದ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ರೈತರ ಅನುಕೂಲಕ್ಕಾಗಿ ಹಾಲಿನ ದರವನ್ನು ಏರಿಕೆ ಮಾಡುತ್ತೇವೆ ಎಂದು ಪಶು ಸಂಗೋಪನಾ ಸಚಿವ ಸಿ. ಪುಟ್ಟರಂಗಶೆಟ್ಟಿ ಹೇಳಿದ್ದಾರೆ.

ಸಂಪುಟ ಸಭೆ ಬಳಿಕ ವಿಧಾನಸೌಧದ ಬಳಿ ಮಾತನಾಡಿರುವ ಅವರು, ಹಾಲಿನ ದರ ಏರಿಕೆ‌ ವಿಚಾರವಾಗಿ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆದಿದೆ. ಚುನಾವಣಾ ನೀತಿ‌ ಸಂಹಿತೆ ಇದೆ. ಹೀಗಾಗಿ ಸಿಎಂ ವಿವೇಚನೆಗೆ ಬಿಟ್ಟಿದ್ದೇವೆ. ಚುನಾವಣಾ ಆಯೋಗದ ಅನುಮತಿ ಪಡೆದು ಸಿಎಂ‌ ನಿರ್ಧಾರ ಮಾಡ್ತಾರೆ. ರೈತರ ಅನುಕೂಲಕ್ಕಾಗಿ ಹಾಲಿನ ದರ ಏರಿಕೆ ಮಾಡುತ್ತೇವೆ ಎಂದಿದ್ದಾರೆ.

ಸಂಪುಟ ಸಭೆಯಲ್ಲಿ ಹಲವು ನಿರ್ಣಯ

ವಿಧಾನಸೌಧದಲ್ಲಿ ಮಂಗಳವಾರ ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 5೦ ವಿಷಯಗಳ ಕುರಿತು ಚರ್ಚೆ ನಡೆದಿದೆ. ಹಲವು ನಿರ್ಣಯಗಳನ್ನು ತೆಗದುಕೊಳ್ಳಲಾಗಿದೆ. ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸಾರ್ವಜನಿಕವಾಗಿ ಘೋಷಣೆ ಮಾಡಿಲ್ಲ. ಚುನಾವಣಾ ಆಯೋಗದ ಅನುಮತಿ ಪಡೆದು ಘೋಷಣೆ ಮಾಡುವ ಸಾಧ್ಯತೆಯಿದೆ.

Also Read
ಚುನಾವಣಾ ವ್ಯವಸ್ಥೆ ಹೈಜಾಕ್ ಆರೋಪ; ಮೋದಿ, ಶಾ, ಜ್ಞಾನೇಶ್ ಕುಮಾರ್, ಭಾಗವತ್ ಯಾರನ್ನೂ ಬಿಡಲ್ಲ: ರಾಹುಲ್ ಗಾಂಧಿ ವಾಗ್ದಾಳಿ | Rahul Gandhi
ಪಶು ಸಂಗೋಪನಾ ಸಚಿವ ಸಿ.ಪುಟ್ಟರಂಗಶೆಟ್ಟಿ

ಪ್ರಮುಖವಾಗಿ ಬೆಂಗಳೂರಿನಲ್ಲಿ ಐದು ಪೊಲೀಸ್ ಆಯುಕ್ತಾಲಯ ರಚನೆಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಇನ್ನೂ ಮೂಲಸೌಕರ್ಯ, ಕುಡಿಯುವ ನೀರು ಯೋಜನೆಗೆ ಒಪ್ಪಿಗೆ, ಬರ ಹಿನ್ನೆಲೆ ಮೇವು ಸಂಗ್ರಹಣಕ್ಕೆ ಅನುದಾನ, ಟ್ಯಾಂಕರ್ ಮೂಲಕ ಜಾನುವಾರುಗಳ ಕುಡಿಯುವ ನೀರಿಗೆ ವ್ಯವಸ್ಥೆ, ಗೋಸಂರಕ್ಷಣಾ ಕೇಂದ್ರಗಳಿಗೆ ಅನುದಾನಕ್ಕೆ ಸಭೆ ಅನುಮೋದನೆ ನೀಡಿದೆ.

ಝೆಡ್​ಪಿ-ಟಿಪಿ ಚುನಾವಣೆ

ಸಭೆಯಲ್ಲಿ ಮುಖ್ಯವಾಗಿ ಮುಂದಿನ ವರ್ಷ ಜನವರಿ‌ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ನಡೆಸುವ ಸಂಬಂಧ ಚರ್ಚೆ ನಡೆಸಲಾಗಿದೆ. ಬಹುತೇಕ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಝೆಡ್​ಪಿ-ಟಿಪಿ ಚುನಾವಣೆ ಬಳಿಕ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.

ಫಾರ್ಮ್-7 ದುರ್ಬಳಕೆಗೆ ಎಸ್​ಐಟಿ ತನಿಖೆ

ಚುನಾವಣಾ ಆಯೋಗದ ಎಸ್​ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಫಾರ್ಮ್-7 ದುರ್ಬಳಕೆ ಹಿನ್ನೆಲೆ ಆ ಕುರಿತು ಎಸ್​ಐಟಿ ಮೂಲಕ ತನಿಖೆ ನಡೆಸಬಹುದೇ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಆದ್ರೆ ಈಗಾಗಲೇ ಎಫ್ ಐಆರ್ ದಾಖಲಾಗಿರುವ ಪ್ರಕರಣದ ಬಗ್ಗೆ ಸ್ಥಳಿಯವಾಗಿಯೇ ತ‌ನಿಖೆ‌ ಚುರುಕುಗೊಳಿಸಲು ನಿರ್ಧರಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net